ಕೊಳ್ಳೇಗಾಲ: ತಾಲ್ಲೂಕಿನ ಕುಂತೂರು ಮೋಳೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆರೋಪಿಯಿಂದ 15 ಚೀಲ ಅಕ್ಕಿ ಜಪ್ತಿ ಮಾಡಿದ್ದಾರೆ.

ಗ್ರಾಮದ ಬಸವರಾಜು ಬಂಧಿತ ಆರೋಪಿ. ಈತನಿಂದ 755 ಕೆ.ಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಸರ್ಕಾರ ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಶೇಖರಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಆಹಾರ ನಿರೀಕ್ಷಕ ಪ್ರಸಾದ್ ಹಾಗೂ ಎಸ್ಐ ಕರಿಬಸಪ್ಪ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದಾಳಿಯಲ್ಲಿ ಎಎಸ್ಐ ಚಿಕ್ಕಸ್ವಾಮಿ, ಸಿಬ್ಬಂದಿಗಳಾದ ಶಿವಕುಮಾರ್, ಮಾದೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-432704531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.