ಕೊಳ್ಳೇಗಾಲ: ಪಟ್ಟಣದ ಶಂಕನಪುರ ಬಡಾವಣೆಯ ವಿಸ್ಡಂ ಖಾಸಗಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಆರ್ಎಸ್ಎಸ್ ವ್ಯಕ್ತಿತ್ವ ಶಿಬಿರವನ್ನು ಕನ್ನಿಕಾ ಪರಮೇಶ್ವರಿ ದೇವಾಲಯದ ಹತ್ತಿರವಿರುವ ಅಮರಾಲಯ ಸೇವಾಧಾಮಕ್ಕೆ ಸ್ಥಳಾಂತರಿಸಲಾಗಿದೆ ಎಂದು ಆರ್ಎಸ್ಎಸ್ ಸಂಘ ಚಾಲಕ ಕೆ.ವಿ.ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ಸಂಘಟನೆಗಳ ಕಾರ್ಯಕರ್ತರು ಹಾಗೂ ಕಿಡಿಗೇಡಿಗಳು ಶಿಬಿರ ನಡೆಸಲು ಅವಕಾಶ ನೀಡಬಾರದು ಎಂದು ಗಲಾಟೆ ಮಾಡಿ, ಕೊಳ್ಳೇಗಾಲ ಬಿಇಒ ಅವರಿಂದ ವಿಸ್ಡಂ ಶಾಲೆಯ ಆಡಳಿತ ಮಂಡಳಿಗೆ ನೋಟಿಸ್ ಕೊಡಿಸಿ ತೊಂದರೆ ಉಂಟು ಮಾಡಿದ್ದರು. ಕಿಡಿಗೇಡಿಗಳಿಂದ ಶಾಲೆಗೆ ತೊಂದರೆಯಾಗಬಾರದು ಹಾಗೂ ಕಾನೂನು, ನಿಯಮಗಳನ್ನು ಗೌರವಿಸುವ ಉದ್ದೇಶದಿಂದ ಶಿಬಿರವನ್ನು ಸ್ಥಳಾಂತರ ಮಾಡಲಾಗಿದೆ. ಮೇ 10ರಂದು ಶಿಬಿರದ ಸಮಾರೋಪ ನಡೆಯಲಿದೆ ಎಂದು ತಿಳಿಸಿದ್ದಾರೆ.

ಆರ್ಎಸ್ಎಸ್ 100 ವರ್ಷಗಳಿಂದ ದೇಶದ ಕಾನೂನು ಮತ್ತು ಸಂವಿಧಾನದ ನಿಯಮಗಳನ್ನು ಪಾಲಿಸುತ್ತಾ ಸಮಾಜದ ಸಹಕಾರದೊಂದಿಗೆ ಚಟುವಟಿಕೆಗಳನ್ನು ಆಯೋಜಿಸಿಕೊಂಡು ಬಂದಿದೆ ಎಂದು ಕೆ.ವಿ.ರಾಜಣ್ಣ ಸ್ಪಷ್ಟಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-37-1482511994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.