ಕೊಳ್ಳೇಗಾಲ(ಚಾಮರಾಜನಗರ ಜಿಲ್ಲೆ): ಕಾರಿನಲ್ಲಿ 2 ಹುಲಿ ಉಗುರುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ತಾಲ್ಲೂಕಿನ ಜಾಗೇರಿ ಗ್ರಾಮದ ಚಂದ್ರು ಎನ್ನುವವರನ್ನು ಅಪರಾಧ ಪತ್ತೆ ದಳದ ಸಿಬ್ಬಂದಿ ಬಂಧಿಸಿದ್ದಾರೆ.

ಆರೋಪಿಯು ಉಗುರುಗಳನ್ನು ಬೆಂಗಳೂರಿಗೆ ಸಾಗಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆದಿದೆ.

ಸಿಬ್ಬಂದಿ ಎಎಸ್ ತಕೀವುಲ್ಲಾ, ರವಿಕುಮಾರ್, ವೆಂಕಟೇಶ್, ಜಡೇಗೌಡ ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ. ಕಾಳ ಸಂತೆಯಲ್ಲಿ ಮಾರುವ ಸಲುವಾಗಿ ಹೋಗುತ್ತಿದ್ದೇನೆ ಎಂದು ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು. ಪ್ರಕರಣ ದಾಖಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.