ಕೊಳ್ಳೇಗಾಲ: ತಾಲ್ಲೂಕಿನ ಸರಗೂರು ಗ್ರಾಮದ ಬಳಿ ಕಾರಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಆರೋಪದ ಮೇಲೆ ತಾಲ್ಲೂಕಿನ ಉಗನಿಯ ಗ್ರಾಮದ ಇದಾಯತ್ (40) ಎಂಬಾತನನ್ನು ಆಹಾರ ನಿರೀಕ್ಷಕರು ಹಾಗೂ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಯಿಂದ 6 ಚೀಲದಲ್ಲಿದ್ದ 300 ಕೆ.ಜಿ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಈತ ಬಡಜನರ ಬಳಿ ಕಡಿಮೆ ಬೆಲೆಗೆ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಮಳ್ಳವಳ್ಳಿ ಕಡೆಗೆ ಸಾಗಾಣಿಕೆ ಮಾಡುವಾಗ ಸರಗೂರು ಗ್ರಾಮದ ಬಳಿ ಆಹಾರ ಇಲಾಖೆಯ ನಿರೀಕ್ಷಕ ಪ್ರಸಾದ್ ಮತ್ತು ಪಿಎಸ್ಐ ಸುಪ್ರೀತ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-37-2043806150

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.