ಮಂಗಳವಾರ, ಮೇ 18, 2021
23 °C

ಮಹದೇಶ್ವರ ಬೆಟ್ಟ: ಸಾಂಪ್ರದಾಯಿಕ ಯುಗಾದಿ ಜಾತ್ರೆ, ಪ್ರವಾಸಿಗರಿಗೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಈ ಬಾರಿಯ ಯುಗಾದಿ ಜಾತ್ರೆಯನ್ನು ಅತ್ಯಂತ ಸಾಂಪ್ರದಾಯಿಕವಾಗಿ ಮತ್ತು ಸ್ಥಳೀಯವಾಗಿ ನಡೆಸಲು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮದ ಭಾಗವಾಗಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಈ ನಿರ್ಧಾರಕ್ಕೆ‌ ಬರಲಾಗಿದೆ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ಹೇಳಿದ್ದಾರೆ.

ಇದೇ 21ರಿಂದ 25ರ ವರೆಗೆ ಜಾತ್ರೆ ನಿಗದಿಯಾಗಿತ್ತು. ಈ ಅವಧಿಯಲ್ಲಿ ಕೊಠಡಿಗಳು, ಡಾರ್ಮೆಟರಿ ಲಭ್ಯವಿರುವುದಿಲ್ಲ. ರಸ್ತೆಗಳಲ್ಲಿ, ರಂಗ ಮಂದಿರದಲ್ಲಿ ಭಕ್ತರು ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಭಕ್ತರು ಸಾರ್ವಜನಿಕರು ಸಹಕರಿಸಬೇಕು ಎಂದು‌ ಅವರು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು