ಚಾಮರಾಜನಗರ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಮಂಗಳವಾರ ಕೆಪಿಸಿಸಿ ಪ್ರಚಾರಸಮಿತಿ ರಾಜ್ಯಾಧ್ಯಕ್ಷ ವಿನಯ ಕುಮಾರ್ ಸೊರಕೆ ಅವರು ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಹೊಸಹಳ್ಳಿ ಮಧುಸೂಧನ್ ಅವರಿಗೆ ಆದೇಶ ಪತ್ರ ಹಾಗೂ ಪಕ್ಷದ ಬಾವುಟ ಹಸ್ತಾಂತರ ಮಾಡಿದರು.

ಬಳಿಕ ಮಾತನಾಡಿ ವರ್ಷಪೂರ್ತಿ ಪ್ರಚಾರ ಸಮಿತಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಸಮಿತಿಯನ್ನು ಬಲಗೊಳಿಸಲಾಗಿದೆ. ರಾಜ್ಯದ 9 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜಿಲ್ಲಾ ಘಟಕಗಳಿಗೆ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಪ್ರಚಾರ ಸಮಿತಿಯ ಬೂತ್ ಮಟ್ಟದ ಪದಾಧಿಕಾರಿಗಳಿಗೆ ಬೆಂಗಳೂರಿನಲ್ಲಿ ತರಬೇತಿ ನೀಡಲಾಗಿದೆ.

ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಪದಾದಿಕಾರಿಗಳು ಸರ್ಕಾರದ ಜನಪರ ಕಾರ್ಯಕ್ರಮಗಳ ಪ್ರಚಾರಕ್ಕೆ ಒತ್ತು ನೀಡಬೇಕು, ಪಕ್ಷವನ್ನು ಸಂಘಟಿಸಿ, ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ನಾರಾಯಣ್, ಮುಖಂಡರಾದ ಎಚ್.ಸಿ,ಬಸವರಾಜು, ಮುನೀರ್, ನಟರಾಜು, ಬಿ.ಕೆ.ರವಿಕುಮಾರ್, ಚಿಕ್ಕಮಹದೇವ, ಆರ್,ಮಹದೇವ್, ಮಹಮದ್ ಅಸ್ಗರ್, ಎಚ್.ವಿ,ಚಂದ್ರು, ಸೋಮೇಶ್ವರ್, ನಾಗರತ್ನ, ಚಿನ್ನಸ್ವಾಮಿ, ಸ್ವಾಮಿ, ಸದಾಶಿವಮೂರ್ತಿ, ಕಾವೇರಿ ಶಿವಕುಮಾರ್, ರಮೇಶ್, ಎ.ಎಸ್.ಗುರುಸ್ವಾಮಿ, ರಾಜಶೇಖರ್ ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.