‘ಮೇಕೆದಾಟು, ಕಳಸಾ ಬಂಡೂರಿ ಸೇರಿದಂತೆ ನೀರಾವರಿ ಯೋಜನೆಗಳ ಅನುಷ್ಠಾನ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮರೆಮಾಚಿ ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಹಾಗೂ ಜೆಡಿಎಸ್ ಪಾದಯಾತ್ರೆ ನಡೆಸುತ್ತಿದೆ. ಲಿಂಗಾಯತ ನಾಯಕರನ್ನು ಮುಗಿಸಿರುವ ಪ್ರಹ್ಲಾದ್ ಜೋಷಿಯವರು ಈಗ ಕುಮಾರಸ್ವಾಮಿಯವರನ್ನು ಮುಗಿಸಲು ಹೊರಟಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೆಳೆಯುವುದು ಹಾಗೂ ಕುಮಾರಸ್ವಾಮಿ ಶಕ್ತಿ ಕುಂದಿಸುವ ಮೂಲಕ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವುದು ಉದ್ದೇಶ’ ಎಂದರು.