ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌‌‌ಎಸ್: ಲೋಕಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿಗಳ ಸಂದರ್ಶನ: ಗಣೇಶ್

Published 3 ಜನವರಿ 2024, 15:01 IST
Last Updated 3 ಜನವರಿ 2024, 15:01 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌‌‌ಎಸ್) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲೂ ಸ್ಪರ್ಧಿಸುತ್ತದೆ. ಆಸಕ್ತ ಸ್ಪರ್ಧಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತಿದೆ’ ಎಂದು ಕೆಆರ್‌‌‌‌‌ಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ.ಗಣೇಶ್ ಹೇಳಿದರು.

‘ಜ.6, 7ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಈ ವಿಚಾರ ಕುರಿತು ಕಳೆದ ತಿಂಗಳು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.  ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು. ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ ₹5000 ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ₹10,000 ಸಂದರ್ಶನ ಶುಲ್ಕವಿರುತ್ತದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂದರ್ಶನದ ನಂತರ, ರಾಜ್ಯ ಸಮಿತಿ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ ಮೊ.9611720802 ಸಂಖ್ಯೆಗೆ ಸಂಪರ್ಕಿಸಬಹುದು ಎಂದರು.

ಕೆಆರ್‌‌‌‌ಎಸ್ ಜಿಲ್ಲಾ ಕಾರ್ಯದರ್ಶಿ ಮಧುನಾಯಕ್, ಚಂದ್ರಶೇಖರ್, ಶ್ರೀನಿವಾಸ್ ಬೂದಬಾಳು, ಸದಸ್ಯ ರವಿಕುಮಾರ್, ರಾಜಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT