ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿಯ ಬಳಿ ಮಂಗಳವಾರ ರಾತ್ರಿ ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೈಸೂರಿನಿಂದ ಚಾಮರಾಜನಗರದ ಕಡಗೆ ಬರುತ್ತಿದ್ದ ಅಶ್ವಮೇಧ ಬಸ್ ಹಾಗೂ ನಗರದಿಂದ ನಂಜನಗೂಡಿನ ಕಡೆಗೆ ತೆರಳುತ್ತಿದ್ದ ಲಾರಿ ಮಧ್ಯೆ ಬೆಂಡರವಾಡಿ ಗ್ರಾಮದ ತಿರುವೊಂದರಲ್ಲಿ ಅಪಘಾತವಾಗಿದೆ.

ಅಪಘಾತದ ತೀವ್ರತೆಗೆ ಬಸ್ನ ಮುಂಭಾಗ ನಜ್ಜುಗುಜ್ಜಾಗಿದ್ದು ಲಾರಿ ಹಾಗೂ ಬಸ್ನ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಹೆಚ್ಚಿನವರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸೇರಿದವರು ಎನ್ನಲಾಗಿದ್ದು ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತವಾದ ಹಿನ್ನೆಲೆಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಸ್ಥಳಕ್ಕೆ ತೆರಳಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.