ಶನಿವಾರ, ಮೇ 15, 2021
26 °C

ಚಾಮರಾಜನಗರ: 127 ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: 6ನೇ ವೇತನ ಆಯೋಗದ ಶಿಫಾರಸಿನಂತೆ ಸಂಬಳ ನೀಡಬೇಕೆಂದು ಒತ್ತಾಯಿಸಿ ಕೆಎಸ್ಆರ್‌ಟಿಸಿ ನೌಕರರು ಮುಷ್ಕರ ಮುಂದುವರಿಸಿರುವ ಬೆನ್ನಲ್ಲೇ ಚಾಮರಾಜನಗರ ವಿಭಾಗದಲ್ಲಿ ಬುಧವಾರ ಮುನ್ನೂರಕ್ಕೂ ಹೆಚ್ಚು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಕೆಸ್‌ಆರ್‌ಟಿಸಿ ವಿಭಾಗದ ವ್ಯಾಪ್ತಿಯಲ್ಲಿ ಬುಧವಾರ 127 ಬಸ್‌ಗಳು ಸಂಚಾರ ನಡೆಸಿವೆ. ಬಹುತೇಕ ಬಸುಗಳು ನಗರ ಹಾಗೂ ಪಟ್ಟಣಗಳ ನಡುವೆ ಓಡಾಡಿವೆ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ. ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಅನುಮತಿ ನಿರಾಕರಣೆ: ಈ ಮಧ್ಯೆ, ಸರ್ಕಾರದ ವಿರುದ್ಧ ಜಿಲ್ಲಾಡಳಿತ ಭವನದ ಎದುರುಗಡೆ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಒಕ್ಕೂಟ ತೀರ್ಮಾನಿಸಿತ್ತು. ಆದರೆ ಇದಕ್ಕೆ ಪೊಲೀಸರು ಅವಕಾಶ ನಿರಾಕರಿಸಿದರು.

'ನಮ್ಮ ಬೇಡಿಕೆ ಈಡೇರುವವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಎದುರು ಸತ್ಯಾಗ್ರಹ ನಡೆಸಲು ತೀರ್ಮಾನಿಸಿದ್ದೆವು. ಈ ಸಂಬಂಧ ಮಂಗಳವಾರ ನಗರ ಪೊಲೀಸ್ ಠಾಣೆಗೆ ಅನುಮತಿಗಾಗಿ ಮನವಿ ಸಲ್ಲಿಸಿದ್ದೆವು. ಆದರೆ ಪೊಲೀಸರು ಅನುಮತಿ ನೀಡದೆ, ಪ್ರತಿಭಟಿಸುವ ನಮ್ಮ ಹಕ್ಕನ್ನು ನಿರಾಕರಿಸಿದ್ದಾರೆ’ ಎಂದು ಸಾರಿಗೆ ನೌಕರರ ಒಕ್ಕೂಟದ ರಾಜೇಶ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು