ಸೋಮವಾರ, ಜನವರಿ 27, 2020
21 °C
ನುಡಿನಮನ ಕಾರ್ಯಕ್ರಮದಲ್ಲಿ ಪಿಯು ಇಲಾಖೆ ಉಪನಿರ್ದೇಶಕ ಡಿ.ಎಸ್.ಕೃಷ್ಣಮೂರ್ತಿ ಬಣ್ಣನೆ

ಸಾಹಿತ್ಯ ಲೋಕದ ದೈತ್ಯ ಪ್ರತಿಭೆ ಕುವೆಂಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘20ನೇ ಶತಮಾನ ದಲ್ಲಿ ಕನ್ನಡ ಸಾಹಿತ್ಯ ಲೋಕದ ದೈತ್ಯ ಪ್ರತಿಭೆ ರಾಷ್ಟ್ರಕವಿ ಕುವೆಂಪು. ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆ ಅಪಾರ’ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ.ಎಸ್.ಕೃಷ್ಣಮೂರ್ತಿ ಹೇಳಿದರು.

ನಗರದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಕಚೇರಿಯ ಸಭಾಂಗಣ ದಲ್ಲಿ ಕರ್ನಾಟಕ ಸೇನಾಪಡೆ ರಾಜ್ಯ ಘಟಕದಿಂದ ಇತ್ತೀಚೆಗೆ ನಡೆದ ಕುವೆಂಪು ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕುವೆಂಪು ಕಾದಂಬರಿ, ಕಾವ್ಯ, ನಾಟಕ, ನಾಟಕ, ಕಥೆ, ಖಂಡಕಾವ್ಯ ಹೀಗೆ... ಎಲ್ಲ ಪ್ರಕಾರಗಳಲ್ಲೂ ಸಾಹಿತ್ಯ ಕೃಷಿ ಮಾಡಿದ್ದಾರೆ. ವಿಶ್ವ ಮಾನವ ಸಂದೇಶ ನೀಡಿದ್ದಾರೆ. ಪ್ರತಿಯೊಬ್ಬರೂ ಕುವೆಂಪು ಅವರ ಸಾಹಿತ್ಯವನ್ನು ಓದಬೇಕು’ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಸ್.ವಿನಯ್ ಮಾತನಾಡಿ, ‘ಕುವೆಂಪು ವೈಚಾರಿಕ ನೆಲೆಯಲ್ಲಿ ತಮ್ಮ ಕೃತಿಗಳನ್ನು ರಚಿಸಿದ್ದಾರೆ. ಅವರಿಗೆ ಪ್ರಕೃತಿ ಪ್ರಿಯವಾದ ವಿಷಯ. ಮಲೆನಾಡಿನ ಪ್ರಕೃತಿಯ ಚಿತ್ರಣವನ್ನು ನಮ್ಮ ಕಣ್ಮುಂದೆ ತಂದು ಇಡುತ್ತಾರೆ’ ಎಂದು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ. ಶ್ರೀನಿವಾಸಗೌಡ ಮಾತನಾಡಿದರು.

ಸನ್ಮಾನ

ಮೈಸೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಆರ್. ಪ್ರದೀಪ್‌ಕುಮಾರ್ ದೀಕ್ಷಿತ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸೇನಾಪಡೆಯ ಗೌರವ ಅಧ್ಯಕ್ಷ ಶಾ.ಮುರಳಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಚನ್ನವೀರೇಗೌಡ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಎ.ಕುಮಾರ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಚಾ.ರಾ.ಕುಮಾರ್, ಮುಖಂಡರಾದ ಗಣೇಶ್‌ ದೀಕ್ಷಿತ್, ನಿಜಧ್ವನಿ ಗೋವಿಂದ ರಾಜು, ಮಹೇಶ್‌ ಗೌಡ, ಆಲೂರು ನಾಗೇಂದ್ರ, ರಾಜಶೇಖರ್, ಹ.ವಿ. ನಟರಾಜ್, ಪ್ರಿಯಾಂಕ ಗೌಡ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು