ಚಾಮರಾಜನಗರ: ಕಟ್ಟಡ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಿ, ಅವರು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಾಡಬೇಕು ಎಂದು ಶಾಸಕ ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಮಂಗಳವಾರ ಸಲಹೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿ ಬದುಕು ಹಸನಾಗಲು ಶಿಕ್ಷಣ ಮುಖ್ಯ. ಉನ್ನತ ಶಿಕ್ಷಣ ನೀಡಿ ಉನ್ನತ ಹುದ್ದೆಗಳನ್ನು ಪಡೆಯಲು ಅಗತ್ಯವಿರುವ ಎಲ್ಲ ಪ್ರೋತ್ಸಾಹ ನೀಡಬೇಕು. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳ ಭವಿಷ್ಯ ಉಜ್ವಲಗೊಳಿಸಬೇಕು’ ಎಂದರು.

‘ಶ್ರಮಿಕರ ಶ್ರೇಯೋಭಿವೃದ್ದಿಗಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇದನ್ನು ಪಾರದರ್ಶಕವಾಗಿ ಅರ್ಹರಿಗೆ ತಲುಪಿಸುವ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ. ಅರ್ಹರನ್ನು ಗುರುತಿಸಿ ಯೋಜನೆ ಸದ್ಬಳಕೆ ಮಾಡಿಕೊಳ್ಳಲು ಬೇಕಿರುವ ಎಲ್ಲ ನೆರವನ್ನು ಅಧಿಕಾರಿ ವರ್ಗ ಮಾಡಬೇಕಿದೆ’ ಎಂದು ಸಿ. ಪುಟ್ಟರಂಗಶೆಟ್ಟಿ ಹೇಳಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ‘ ವಿದ್ಯಾರ್ಥಿ ಜೀವನದ ಪ್ರತಿ ಹಂತದಲ್ಲಿಯೂ ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಅಗ್ರ ಸ್ಥಾನ ಪಡೆಯಬೇಕು. ಓದಿನ ಕಡೆಗೆ ಆಸಕ್ತಿವಹಿಸಬೇಕು. ಉನ್ನತ ಉದ್ಯೋಗ ಸಿಗುವವರೆಗೂ ನಿರಂತರ ಅಧ್ಯಯನ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಪೋಷಕರು ನಿಮ್ಮ ಏಳಿಗೆಗಾಗಿ ಕಷ್ಟಪಟ್ಟು ದುಡಿಯುತ್ತಿದ್ದಾರೆ. ನಿಮ್ಮ ಭವಿಷ್ಯ ಉತ್ತಮಗೊಳಿಸಲು ಎಲ್ಲ ತ್ಯಾಗಕ್ಕೆ ಮುಂದಾಗಿದ್ದಾರೆ. ಮುಂದೆ ಪೋಷಕರು ಖುಷಿ ನೆಮ್ಮದಿಯಿಂದ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ’ ಎಂದು ಹೇಳಿದರು.

ಕಾರ್ಮಿಕ ನಿರೀಕ್ಷಕರಾದ ವೀಣಾ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯದರ್ಶಿ ಮಹೇಶ್ ಇತರರು ಇದ್ದರು.

‘200 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್’

ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ. ಸವಿತಾ ಮಾತನಾಡಿ ‘ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅವರ ಮೆರಿಟ್ ಆಧಾರದ ಮೇಲೆ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಪ್ರತಿ ತಾಲ್ಲೂಕಿಗೆ 40ರಂತೆ ಜಿಲ್ಲೆಯಲ್ಲಿ ಒಟ್ಟು 200 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಸೌಲಭ್ಯ ಸಿಗುತ್ತಿದೆ’ ಎಂದರು. ‘ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಮಧ್ಯವರ್ತಿಗಳಿಗೆ ಅವಕಾಶವಿಲ್ಲದೆ ನೇರವಾಗಿ ಅರ್ಹರಿಗೆ ಇಲಾಖೆಯ ಯೋಜನೆಗಳನ್ನು ತಲುಪಿಸಲಾಗುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.