ಗುರುವಾರ , ಮಾರ್ಚ್ 30, 2023
31 °C

ಚಾಮರಾಜನಗರ: ಪಡಿತರ ಇ–ಕೆವೈಸಿ: 1.26 ಲಕ್ಷ ಮಂದಿ ಬಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಪಡಿತರ ಚೀಟಿ ಇ–ಕೆವೈಸಿ ಮಾಡಿಸಿಕೊಳ್ಳಲು ಇನ್ನೂ 1,26,821 ಮಂದಿ ಬಾಕಿ ಇದ್ದು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಇ–ಕೆವೈಸಿ ಮಾಡಿಸಿಕೊಳ್ಳಲು ಇದೇ 10ರವರೆಗೆ ಕೊನೆ ಅವಕಾಶ ನೀಡಿದೆ. 

ಜಿಲ್ಲೆಯಲ್ಲಿ 35,977 ಎ.ಎ.ವೈ (ಅಂತ್ಯೊದಯ) ಪಡಿತರ ಚೀಟಿಗಳಿದ್ದು, 1,37,510 ಸದಸ್ಯರಿದ್ದಾರೆ. ಈ ಪೈಕಿ 1,14,196 ಸದಸ್ಯರ ಇ-ಕೆವೈಸಿ ಆಗಿದ್ದು, ಉಳಿದ 23,316 ಸದಸ್ಯರ ಇ-ಕೆವೈಸಿ ಆಗಬೇಕಿದೆ.

ಜಿಲ್ಲೆಯಲ್ಲಿ ಇದುವರೆಗೆ 2,53,135 ಬಿಪಿಎಲ್‌ ಪಡಿತರ ಚೀಟಿಗಳನ್ನು ವಿತರಿಸಲಾಗಿದ್ದು, 7,20,355  ಫಲಾನುಭವಿಗಳಿದ್ದಾರೆ. ಈ ಪೈಕಿ 6,16,850 ಸದಸ್ಯರ ಇ-ಕೆವೈಸಿಯಾಗಿದ್ದು, ಇನ್ನೂ 1,03,505 ಸದಸ್ಯರ ದೃಢೀಕರಣ ಬಾಕಿ ಇದೆ. 

ಪ್ರತಿ ದಿನ ಬೆಳಿಗ್ಗೆ 8ರಿಂದ ರಾತ್ರಿ 8ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇ-ಕೆವೈಸಿ ಆಗಿಲ್ಲದವರ ಮಾಹಿತಿ ಪಟ್ಟಿಯನ್ನು ಎಲ್ಲ ನ್ಯಾಯಬೆಲೆ ಅಂಗಡಿಗಳ ಮುಂದೆ ಪ್ರದರ್ಶಿಸಲಾಗಿದೆ.

ಪಡಿತರ ಚೀಟಿ (ರೇಷನ್ ಕಾರ್ಡ್), ಆಧಾರ್‌ ಸಂಖ್ಯೆ, ದೂರವಾಣಿ ಸಂಖ್ಯೆ, ಅಡುಗೆ ಅನಿಲ ಸಂಪರ್ಕ ಹೊಂದಿರುವ ಬಗ್ಗೆ ಹಾಗೂ ಕುಟುಂಬದವರ ಸಂಬಂಧ ಮಾಹಿತಿ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಮಾಹಿತಿ ನೀಡಬೇಕು.

‘ಇ-ಕೆವೈಸಿ ಮಾಡಿಸದೇ ಇರುವ ಫಲಾನುಭವಿಗಳು ಇದೇ 10ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಇದು ಅಂತಿಮ ಅವಕಾಶವಾಗಿದೆ’ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಯೋಗಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.