ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನಿನ ಕನಿಷ್ಠ ಅರಿವು ಹೊಂದಿ: ವಿದ್ಯಾರ್ಥಿಗಳಿಗೆ ಸಲಹೆ

Published 22 ಜುಲೈ 2023, 15:53 IST
Last Updated 22 ಜುಲೈ 2023, 15:53 IST
ಅಕ್ಷರ ಗಾತ್ರ

ಚಾಮರಾಜನಗರ: ವಿದ್ಯಾರ್ಥಿಗಳಿಗೆ ಓದುವ ಹಂತದಲ್ಲಿ ದೈನಂದಿನ ಜೀವನದಲ್ಲಿ ಬರುವ ಸಮಸ್ಯೆಗಳನ್ನು ನಿರ್ವಹಿಸಲು ಕನಿಷ್ಠ ಮಟ್ಟದ ಕಾನೂನುಗಳ ಅರಿವು ಇರಬೇಕು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಶನಿವಾರ ಹೇಳಿದರು.

ತಾಲ್ಲೂಕಿನ ಚಂದಕವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರಗಳು ಎಷ್ಟೇ ಕಠಿಣ ಕಾನೂನುಗಳನ್ನು ಜಾರಿಗೆ ತಂದರೂ ಬಾಲ್ಯ ವಿವಾಹ ಮತ್ತು ಪೋಕ್ಸೊ ಕಾಯ್ದೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಇದ್ದಾಗ ತಪ್ಪು ಮಾಡುವುದು ಕಡಿಮೆಯಗುತ್ತದೆ’ ಎಂದರು. 

‘ವಿದ್ಯಾರ್ಥಿಗಳು ಸಾಮಾಜಿಕ ಜಾಲ ತಾಣಗಳಿಂದ ದೂರವಿರಬೇಕು. ಪ್ರೀತಿ-ಪ್ರೇಮಕ್ಕೆ ಸಿಲುಕಿ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು. ಈ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು’ ಎಂದರು. 

‘ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳಿವೆ. ಮೂಲಭೂತ ಕರ್ತವ್ಯಗಳನ್ನು ಪಾಲನೆ ಮಾಡಿದರೆ, ಹಕ್ಕುಗಳು ತಾನಾಗಿಯೇ ಲಭಿಸುತ್ತವೆ. ಪ್ರತಿಯೊಬ್ಬರೂ ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಸಂವಿಧಾನವನ್ನು ಓದುವುದರ ಜೊತೆಗೆ ಅವರ ಆದರ್ಶಗಳನ್ನು ಬೆಳೆಸಿಕೊಳ್ಳಬೇಕು’ ಎಂದರು.

ಚಾಮರಾಜನಗರ ಪೂರ್ವ ಪೋಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಶ್ರೀಕಾಂತ್ ಮಾತನಾಡಿ, ‘ಯುವ ಜನರು ದುಶ್ಚಟಗಳಿಗೆ ಮಾರುಹೋಗಿ ತಮ್ಮ ಅಮೂಲ್ಯವಾದ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಸಮಯದಲ್ಲಿ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಮೂಲಕ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಇದರಿಂದ ಪೋಷಕರು ಹಾಗೂ ಪೊಲೀಸ್ ಇಲಾಖೆಗೆ ದೊಡ್ಡ ಸಮಸ್ಯೆಯಾಗುತ್ತಿದೆ. ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಯುವ ಪೀಳಿಗೆ ಜಾಗೃತರಾಗಬೇಕು. ದುಷ್ಕೃತ್ಯಗಳ ಬಗ್ಗೆ ಮಾಹಿತಿ ಇದ್ದಲ್ಲಿ ಸ್ಥಳೀಯ ಠಾಣೆಗೆ ತಿಳಿಸಿದರೆ ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ನಾವು ಸದಾ ಸಿದ್ದರಾಗಿರುತ್ತೇವೆ’ ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಎಚ್.ಎನ್.ಸ್ವಾಮಿ ಮಾತನಾಡಿದರು. ಉಪನ್ಯಾಸಕರಾದ ನಟರಾಜು, ಪ್ರಭುಸ್ವಾಮಿ, ಡಿ.ಶಕುಂತಲಾ, ಎಎಸ್‌ಐ ಮಹೇಶ್.ಕೆ.ಸಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT