ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಡಿಯೊ ಸತ್ಯಾಸತ್ಯತೆ: ತನಿಖೆಗೆ ಒತ್ತಾಯ

Last Updated 7 ಜೂನ್ 2021, 13:41 IST
ಅಕ್ಷರ ಗಾತ್ರ

ಚಾಮರಾಜನಗರ: ‘ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಹಾಗೂ ಜಿಲ್ಲೆಗೆ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ವೈರಲ್‌ ಆಗಿರುವ ಆಡಿಯೊಗಳ ಸತ್ಯಾಸತ್ಯತೆ ಪರಿಶೀಲಿಸಲು ತನಿಖೆ ನಡೆಸಬೇಕು’ ಎಂದು ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿಯ ಗೌರವ ಅಧ್ಯಕ್ಷ ವೆಂಕಟರಮಣಸ್ವಾಮಿ (ಪಾಪು) ಅವರು ಸೋಮವಾರ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ದುರ್ಘಟನೆಗೆ ಸಂಬಂಧಿಸಿದಂತೆ ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಆದರೆ, ಒಳ್ಳೆಯ ಅಧಿಕಾರಿಗಳಿಗೆ ನೈತಿಕ ಸ್ಥೈರ್ಯ ತುಂಬಿಸುವ ಕೆಲಸ ಆಗಬೇಕು’ ಎಂದರು.

‘ಜಿಲ್ಲೆಯ ಆಸ್ಪತ್ರೆಗೆ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಹಾಗೂ ಅಧಿಕಾರಿ ನಡುವಿನ ಸಂಭಾಷಣೆಯ ಬಗ್ಗೆ ತನಿಖೆ ನಡೆಸಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

ಜಿಲ್ಲಾ ಅಭಿವೃದ್ಧಿ ಹೋರಾಟ ಸಮಿತಿಯ ವೀರಭದ್ರಸ್ವಾಮಿ ಮಾತನಾಡಿ, ‘ಆಮ್ಲಜನಕ ಪೂರೈಕೆಯಾಗದೇ ಮೃತಪಟ್ಟವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ, ಐದು ಎಕರೆ ಜಮೀನು ಹಾಗೂ ₹5 ಲಕ್ಷ ಪರಿಹಾರ ನೀಡಬೇಕು. ಜೊತೆಗೆ ಮೃತರಾದವರ ಮಕ್ಕಳನ್ನು ದತ್ತು ಪಡೆದು ಶಿಕ್ಷಣ ನೀಡಿ ಅವರ ಜೀವನವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಚಾ.ಗು.ನಾಗರಾಜು, ನಿಜಧ್ವನಿ ಗೋವಿಂದರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT