ಚಾಮರಾಜನಗರ: ‘ಸಂವಿಧಾನದ ಆಶೋತ್ತರಗಳನ್ನು ಈಡೇರಿಸಲು ಯುವಜನತೆ ಸಂವಿಧಾನ ಅಧ್ಯಯನ ಮಾಡುವುದರ ಜೊತೆಗೆ ಸಂವಿಧಾನದ ಆಶಯಗಳು, ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೋಮವಾರ ಕರೆ ನೀಡಿದರು.

ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಜಾ ಪರಿವರ್ತನಾ ವೇದಿಕೆ ಸಹಯೋಗದಲ್ಲಿ ನಮ್ಮ ಸಂವಿಧಾನ ನಮ್ಮ ಹೆಮ್ಮೆ-ಸಂವಿಧಾನ ಜಾಗೃತಿ ವರ್ಷ-2024ರ ಅಂಗವಾಗಿ ನಾಗರಿಕ ಹಕ್ಕು ಸಂರಕ್ಷಣಾ ಕಾಯ್ದೆ-1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧಕ) ಕಾಯ್ದೆ-1989 ಹಾಗೂ ನಿಯಮಗಳು-1995ರ ಕುರಿತು ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಸಂವಿಧಾನ ಪುಣ್ಯಗ್ರಂಥವಾಗಿದ್ದು, ಸಮ ಸಮಾಜದ ಉದ್ದೇಶಕ್ಕಾಗಿಯೇ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ. ನಾವೆಲ್ಲರೂ ಸಂವಿಧಾನದಡಿಯಲ್ಲಿ ಬದುಕಬೇಕು. ಸಮಾಜದಲ್ಲಿ ನಾಗರಿಕ ಹಕ್ಕುಗಳೊಂದಿಗೆ ಎಲ್ಲ ವರ್ಗಗಳಿಗೂ ಸಮಾನತೆಯಿಂದ ಬದುಕಲು ಅವಕಾಶ ನೀಡಿರುವ ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು’ ಎಂದು ತಿಳಿಸಿದರು.

‘ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ವರ್ಷವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ಜಿಲ್ಲೆಯಾದ್ಯಂತ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನವೆಂಬರ್ 26ರಂದು ಸಂವಿಧಾನ ಪೀಠಿಕೆ ಓದುವ ಮೂಲಕ ಆರಂಭಗೊಂಡ ಸಂವಿಧಾನ ಜಾಗೃತಿ ಸ್ತಬ್ದಚಿತ್ರಗಳು ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿವೆ’ ಎಂದರು.

‘ಸಂವಿಧಾನ ಜಾಗೃತಿಗಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಕಲಾವಿದರಿಂದ ಬೀದಿನಾಟಕ, ಸತ್ತಿಗೆ ಸೂರಪಾನಿಗಳೊಂದಿಗೆ ಸಿಂಗಾರಗೊಂಡ ಎತ್ತಿನಗಾಡಿಗಳಿಂದ ಆಕರ್ಷಕ ಮೆರವಣಿಗೆ, ಪುಸ್ತಕ ಜೋಳಿಗೆ, ಮಕ್ಕಳಿಂದ ಸಂವಿಧಾನ ಪೀಠಿಕೆ ಓದುವಂತಹ ವಿಶೇಷ ಕಾರ್ಯಕ್ರಮಗಳಿಂದ ಸಂವಿಧಾನ ಜಾಗೃತಿ ಜಾಥಾ ಜನಮನಸೂರೆಗೊಂಡಿದೆ. ಎಲ್ಲ ವರ್ಗಗಳ ಜನರು, ಸಂಘ ಸಂಸ್ಥೆಗಳು ಪಾಲ್ಗೊಂಡು ಜಾಥಾಗೆ ಉತ್ತಮ ಸಹಕಾರ ನೀಡಿದ್ದಾರೆ. ಇದರ ಪ್ರತಿಫಲವಾಗಿಯೇ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದೆ. ಇದು ನಮ್ಮ ಹೆಮ್ಮೆ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ಮಾತನಾಡಿದರು. ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪಿ.ದೇವರಾಜು ಹಾಗೂ ವಕೀಲ ಪುಟ್ಟಸ್ವಾಮಿ ಅವರು ನಾಗರಿಕ ಹಕ್ಕು ಸಂರಕ್ಷಣಾ ಕಾಯ್ದೆ-1955, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧಕ) ಕಾಯ್ದೆ-1989 ಹಾಗೂ ನಿಯಮಗಳು-1995ರ ಕುರಿತು ವಿಚಾರ ಮಂಡಿಸಿದರು.

ನಳಂದ ಬೌದ್ಧ ವಿಶ್ವವಿದ್ಯಾಲಯದ ತಿಸ್ಸ ಬಂತೇಜೀ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕ ಚಿಕ್ಕಬಸವಯ್ಯ, ಪ್ರಜಾ ಪರಿವರ್ತನಾ ವೇದಿಕೆಯ ಜಿಲ್ಲಾಧ್ಯಕ್ಷ ಸಿ.ಎಂ.ಕೃಷ್ಣಮೂರ್ತಿ, ಇತರರು ಇದ್ದರು.

ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ ಮತ್ತು ತಂಡ ನಡೆಸಿಕೊಟ್ಟ ಭೀಮಗೀತೆ ಗಾಯನ ಗಮನ ಸೆಳೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.