ಸಂತೇಮರಹಳ್ಳಿ: ಇಲ್ಲಿನ ಬಸ್ ನಿಲ್ದಾಣದಲ್ಲಿ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರಿಗೆ ಕಾನೂನು ಅರಿವು ಹಾಗೂ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಎಎಸ್ಐ ಗಿರೀಶ್ ಮಾತನಾಡಿ, ಸಾರ್ವಜನಿಕರಲ್ಲಿ ಕಾನೂನಿನ ಅರಿವು ಕೊರತೆ ಇರುವ ಕಾರಣ ಅಪರಾಧಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ತಿಳಿವಳಿಕೆ ಅಗತ್ಯವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅಪರಾಧಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಇದನ್ನು ತಡೆಯಲು ಪೊಲೀಸ್ ಇಲಾಖೆ ಸಾಕಷ್ಟು ಜಾಗೃತಿ ಮೂಡಿಸುತ್ತಿದೆ. ಈಗಾಗಲೇ ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಅರಿವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದರಿಂದ ಸ್ವಲ್ಪ ಮಟ್ಟಿನ ಅರಿವು ಉಂಟಾಗಿದೆ ಎಂದು ಹೇಳಿದರು.

ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಹಕರಿಸುವ ಮೂಲಕ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಬೇಕಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಒಂಟಿ ಮಹಿಳೆಯರು ರಸ್ತೆಯಲ್ಲಿ ಹೋಗುವಾಗ ಸರಗಳ್ಳತನ ನಡೆಯುತ್ತಿದೆ. ಯಾರೂ ಇಲ್ಲದ ಮನೆಗಳಲ್ಲಿ ದರೋಡೆ ನಡೆಯುತ್ತದೆ. ಇಂತಹ ಪ್ರಕರಣಗಳನ್ನು ತಡೆಯಲು ಬೀಟ್ ಪೊಲೀಸರಿಂದ ಅಪರಾಧ ಮಾಸಾಚರಣೆ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಪ್ರಸ್ತುತ ಮೊಬೈಲ್ ಫೋನ್ ಪ್ರಪಂಚ ನಿರ್ಮಾಣವಾಗಿದ್ದು, ಇದರಿಂದ ಸೈಬರ್ ಅಪರಾಧಗಳು ಹೆಚ್ಚುತ್ತಿವೆ. ಸಾರ್ವಜನಿಕರು ಇದರ ಬಗ್ಗೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.ಮುಖ್ಯ ಕಾನ್ಸ್ಟೆಬಲ್ ಪ್ರಭು, ಆನಂದ್, ವಸಂತ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.