ಸಂತೇಮರಹಳ್ಳಿ: ಸಮೀಪದ ಗೂಳಿಪುರ ಗ್ರಾಮದಲ್ಲಿ ಸಂತೇಮರಹಳ್ಳಿ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ ಈಚೆಗೆ ನಡೆಯಿತು.

ಪಿಎಸ್ಐ ಟಿ.ಎಂ.ತಾಜುದ್ಧೀನ್ ಮಾತನಾಡಿ, ಗ್ರಾಮಗಳಲ್ಲಿ ಅಪರಾಧಗಳನ್ನು ತಡೆಗಟ್ಟಲು ಗ್ರಾಮಸ್ಥರು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಜತೆಗೆ ಗ್ರಾಮಗಳಲ್ಲಿ ಅಪರಾಧ ಪ್ರಕರಣಗಳು ಕಂಡು ಬಂದಾಗ ತಪ್ಪದೇ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಈಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು. ಅಪರಿಚಿತ ವ್ಯಕ್ತಿಗಳು ಸುತ್ತಾಡುವುದು ಕಂಡು ಬಂದಾಗ ತಿಳಿಸಬೇಕು. ಒಂಟಿ ಮನೆಗಳಲ್ಲಿ ಕಳ್ಳತನಗಳು ನಡೆಯುವ ಸಾಧ್ಯತೆ ಇರುತ್ತದೆ. ಮಹಿಳೆಯರು ರಸ್ತೆಯಲ್ಲಿ ಸಂಚರಿಸುವಾಗ ಸರಗಳ್ಳತನ ನಡೆಯುತ್ತವೆ. ಇದರ ಬಗ್ಗೆ ಮಹಿಳೆಯರು ಜಾಗರೂಕರಾಗಿರಬೇಕು. ಚಿನ್ನ, ಬೆಳ್ಳಿ ಪಾಲಿಶ್ ನೆಪದಲ್ಲಿ ಚಿನ್ನದ ಸರಗಳನ್ನು ಕಳ್ಳತನ ಮಾಡುತ್ತಾರೆ ಇಂತಹ ವ್ಯಕ್ತಿಗಳನ್ನು ಗಮನಿಸಬೇಕು ಎಂದರು.

ಸಾರ್ವಜನಿಕರು ಕಾನೂನಿನ ಬಗ್ಗೆ ಅರಿವು ಹೊಂದಿದಾಗ ಅಪರಾಧಗಳ ಪ್ರಮಾಣ ಕಡಿಮೆಯಾಗುತ್ತವೆ. ಈ ಹಿನ್ನೆಲೆಯಲ್ಲಿ ಕಾನೂನು ಅರಿವು ಪ್ರತಿಯೊಬ್ಬ ಸಾರ್ವಜನಿಕರಿಗೂ ಬಹಳ ಮುಖ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಅವರು ವಿದ್ಯಾವಂತರಾಗಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗುತ್ತಾರೆ ಎಂದು ತಿಳಿಸಿದರು.

ಮುಖ್ಯಪೇದೆ ರಮೇಶ್, ಮುಖಂಡರಾದ ಸಿದ್ದಲಿಂಗಸ್ವಾಮಿ, ಬಸವಣ್ಣ, ಜಡೇಸ್ವಾಮಿ, ಶಿವಪ್ಪ, ಮಹೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.