ಹನೂರು (ಚಾಮರಾಜನಗರ ಜಿಲ್ಲೆ): ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ತಾಲ್ಲೂಕಿನ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತರೊಬ್ಬರು ಚಿರತೆ ದಾಳಿಯಿಂದ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಚೀರನಹಳ್ಳಿಯ ಪ್ರವೀಣ್ (33) ಮೃತರು.

ಬುಧವಾರ ಬೆಳಗಿನ ಜಾವ ಗ್ರಾಮದ ಆರು ಮಂದಿ ತಾಳುಬೆಟ್ಟದಿಂದ ಸುಮಾರು 7 ಕಿ.ಮೀ. ದೂರವಿರುವ ಮಲೆ ಮಹದೇಶ್ವರ ಸನ್ನಿಧಿಗೆ ಪಾದಯಾತ್ರೆಯಲ್ಲಿ ಹೋಗುವಾಗ ‘ರಂಗಸ್ವಾಮಿ ಒಡ್ಡು’ ಸಮೀಪದಲ್ಲಿ ಚಿರತೆ ದಾಳಿ ನಡೆಸಿದೆ. ಕುತ್ತಿಗೆ ಹಾಗೂ ಮರ್ಮಾಂಗವನ್ನು ಕಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು. ಜೊತೆಗಿದ್ದವರು ಓಡಿ ಪಾರಾಗಿದ್ದಾರೆ.

ಮಲೆ ಮಹದೇಶ್ವರ ವನ್ಯಧಾಮದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಕಾಡಿಗಟ್ಟಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.

ಜಾತ್ರಾ ಮಹೋತ್ಸವ ಹಾಗೂ ಅಮಾವಾಸ್ಯೆ ದಿನಗಳಲ್ಲಿ ಸಾವಿರಾರು ಭಕ್ತರು ಪಾದಯಾತ್ರೆಯಲ್ಲಿ ಬಂದು ಹರಕೆ ಸಲ್ಲಿಸುವುದು ರೂಢಿಯಲ್ಲಿದೆ. ಈಗ, ಚಿರತೆ ದಾಳಿಯಿಂದ ಭಕ್ತರು ಆತಂಕಗೊಂಡಿದ್ದು, ಸೂಕ್ತ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ.

ಪಾದಯಾತ್ರೆಗೆ ನಿರ್ಬಂಧ: ಘಟನೆ ಹಿನ್ನಲೆಯಲ್ಲಿ ತಾಳುಬೆಟ್ಟದಿಂದ ದೇಗುಲದವರೆಗೆ ಪಾದಯಾತ್ರೆ, ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಜ.24ರವರೆಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ.

‘ಸುರಕ್ಷತೆಯ ದೃಷ್ಟಿಯಿಂದ ಭಕ್ತರು ಬಸ್ ಹಾಗೂ ನಾಲ್ಕುಚಕ್ರದ ವಾಹನಗಳಲ್ಲಿ ಬೆಟ್ಟಕ್ಕೆ ತೆರಳಬೇಕು’ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.