ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ | ಚಿರತೆ ದಾಳಿ ಹಸು ಸಾವು

Published 12 ಮೇ 2024, 15:29 IST
Last Updated 12 ಮೇ 2024, 15:29 IST
ಅಕ್ಷರ ಗಾತ್ರ

ಕೊಳ್ಳೇಗಾಲ: ತಾಲ್ಲೂಕಿನ ಅರೇಪಾಳ್ಯದ ಕಾಡಂಚಿನ ಪ್ರದೇಶದಲ್ಲಿ ಚಿರತೆ ದಾಳಿಗೆ ಹಸು ಭಾನುವಾರ ಮೃತಪಟ್ಟಿದೆ.

ಗ್ರಾಮದ ಮುತ್ತು ಎನ್ನುವರಿಗೆ ಸೇರಿದ ಹಸುವನ್ನು ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಸಂದರ್ಭದಲ್ಲಿ ಚಿರತೆಯೊಂದು ದಾಳಿ ಮಾಡಿದೆ. ಚಿರತೆ ನೋಡಿದ ಗ್ರಾಮಸ್ಥರು ಜೋರಾಗಿ ಕೂಗಿಕೊಂಡ ಪರಿಣಾಮ ಚಿರತೆ ಓಡಿ ಹೋಗಿದೆ ಎನ್ನಲಾಗಿದೆ.

ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇಲಾಖೆಯವರು ವೀಕ್ಷಣೆ ಮಾಡಿ ಹಸುವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT