ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗುಂಡ್ಲುಪೇಟೆ: ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

Published 21 ಜನವರಿ 2024, 6:13 IST
Last Updated 21 ಜನವರಿ 2024, 6:13 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ರೈತರಿಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆಗೆ ಅರಣ್ಯ ಇಲಾಖೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯ ಬಾಚಹಳ್ಳಿ ಸಮೀಪದಲ್ಲಿ ಇರಿಸಿದ್ದ ಬೋನಿಗೆ ಶುಕ್ರವಾರ ತಡ ರಾತ್ರಿ ಬಿದ್ದಿದೆ.

 ಸುಮಾರು 5 ರಿಂದ 6 ವರ್ಷ ವಯಸ್ಸಿನ ಚಿರತೆ ಎಂದು ಹೇಳಲಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಬೊಮ್ಮಲಾಪುರದ ಗೋಪಾಲನಾಯಕ ಎಂಬುವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕುರಿ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ಜೊತೆಗೆ ಬಾಚಹಳ್ಳಿ, ಅಂಕಹಳ್ಳಿ ಸೇರಿ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ಪ್ರಾಣಿಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರ ಒತ್ತಾಯದ ಮೇರೆಗೆ ಕುಂದಕೆರೆ ಆರ್‍ಎಫ್ಓ ನವೀನ ಕುಮಾರ್ ನೇತೃತ್ವದಲ್ಲಿ ಬೋನು ಇರಿಸಲಾಗಿತ್ತು. 

 ಮಾಹಿತಿ ತಿಳಿದ ಅರಣ್ಯ ಅಧಿಕಾರಿಗಳು ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆರೆಯಾದ ಚಿರತೆಯನ್ನು ಬಂಡೀಪುರದ ಮೂಲೆಹೊಳೆ ಅರಣ್ಯ ಪ್ರದೇಶದ ಒಳಗೆ ಬಿಡಲಾಯಿತು ಎಂದು ನವೀನ್ ಕುಮಾರ್ ಮಾಹಿತಿ ನೀಡಿದ್ದಾರೆ.

ಈ ವೇಳೆ ಕುಂದಕೆರೆ ವಲಯದ ಆರ್‌‌‌ಎಫ್‍ಓ ನವೀನ್ ಕುಮಾರ್, ಅರಣ್ಯಾಧಿಕಾರಿ ಮನೋಹರ್, ಮಹೇಶ್ ಸೇರಿ ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT