ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಆರ್‌ಟಿ: ಹಸಿವಿನಿಂದ ಮೃತಪಟ್ಟ ಚಿರತೆ

Published : 23 ಸೆಪ್ಟೆಂಬರ್ 2024, 17:02 IST
Last Updated : 23 ಸೆಪ್ಟೆಂಬರ್ 2024, 17:02 IST
ಫಾಲೋ ಮಾಡಿ
Comments

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಹೋಬಳಿಯ ವಡ್ಡರಹಳ್ಳಿಯಲ್ಲಿ ಸೋಮವಾರ ಹೆಣ್ಣು ಚಿರತೆಯ ಕಳೆಬರ ಪತ್ತೆಯಾಗಿದೆ.

ಹುಲಿ ಸಂರಕ್ಷಿತ ಪ್ರದೇಶದ ಗಡಿಯಿಂದ 16 ಕಿ.ಮೀ ದೂರದಲ್ಲಿ ಚಿರತೆಯ ಮೃತದೇಹ ದೊರೆತಿದ್ದು 8 ತಿಂಗಳಿಂದ 1 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಲಾಗಿದೆ. ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು ಹಸಿವಿನಿಂದ ಮೃತಪಟ್ಟಿರುವುದು ತಿಳಿದುಬಂದಿದೆ ಎಂದು ಚಾಮರಾಜನಗರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಶ್ರೀಪತಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT