ಚಾಮರಾಜನಗರ: ಬಿಆರ್ಟಿ ಅರಣ್ಯ ವ್ಯಾಪ್ತಿಯ ಹರವೆ ಹೋಬಳಿ ತೆರಕಣಾಂಬಿ ಸಮೀಪದ ಕೊತ್ತಲವಾಡಿಯ ಕರಿಕಲ್ಲು ಕ್ವಾರಿಯಲ್ಲಿ ಗುರುವಾರ ಚಿರತೆಯ ಕಳೇಬರ ಪತ್ತೆಯಾಗಿದೆ.

ಮೃತ ಗಂಡು ಚಿರತೆಯು 5 ರಿಂದ 6 ವರ್ಷ ವಯಸ್ಸಿನದ್ದಾಗಿದ್ದು ಸಮೀಪದಲ್ಲೇ ನಾಯಿ ಹಾಗೂ ಕರುವಿನ ಕಳೇಬರವೂ ಪತ್ತೆಯಾಗಿರುವುದರಿಂದ ಚಿರತೆ ವಿಷಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಚಿರತೆ ಸಾವಿನ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಬಿಆರ್ಟಿ ಡಿಸಿಎಫ್ ಶ್ರೀಪತಿ, ಎಸಿಎಫ್ ಮಂಜುನಾಥ್ ಸೇರಿದಂತೆ ಹಲವು ಅಧಿಕಾರಿಗಳು ಭೇಟಿನೀಡಿ ಪರಿಶೀಲಿಸಿದ್ದಾರೆ. ಈಚೆಗಷ್ಟೇ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಬಲಿಯಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.