ಶುಕ್ರವಾರ, ಜೂನ್ 25, 2021
21 °C

ಬೊಮ್ಮನಹಳ್ಳಿ: ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮನಹಳ್ಳಿ ಸುತ್ತಮುತ್ತ ಹಲವು ದಿನಗಳಿಂದ ಪ್ರಾಣಿಗಳ ಮೇಲೆ ದಾಳಿ ನಡೆಸಿ ಭಯ ಉಂಟುಮಾಡಿದ್ದ ಚಿರತೆ ಶನಿವಾರ ಬೋನಿಗೆ ಬಿದ್ದಿದೆ.

ಬೊಮ್ಮನಹಳ್ಳಿ ಗ್ರಾಮದ ಜಮೀನುಗಳಿಗೆ ನುಗ್ಗಿ ಹಸು, ಕುರಿ, ನಾಯಿ ಸೇರಿದಂತೆ ಸಾಕು ಪ್ರಾಣಿಗಳು ಹಾಗೂ ಜನರ ಮೇಲೆ ಚಿರತೆ ದಾಳಿ ಮಾಡುತ್ತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ, ಚಿರತೆ ಸೆರೆಗಾಗಿ ಮಹದೇವಪ್ಪ ಎಂಬುವವರ ಜಮೀನಿನಲ್ಲಿ ಬೋನು ಇಟ್ಟಿದ್ದರು.

‘ಎರಡು ತಿಂಗಳ ಅಂತರದಲ್ಲಿ ಮಹದೇವಪ್ಪ ಅವರ ಜಮೀನಿನಲ್ಲಿ ಎರಡು ಚಿರತೆಗಳು ಸೆರೆಯಾಗಿವೆ. ಶನಿವಾರ ಬೋನಿಗೆ ಬಿದ್ದಿರುವ ಗಂಡು ಚಿರತೆಗೆ ಅಂದಾಜು 5 ವರ್ಷ ವಯಸ್ಸಾಗಿರಬಹುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆರೆಯಾದ ಚಿರತೆಯನ್ನು ಮೂಲೆಹೊಳೆ ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.