ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಗಿಮಿಕ್ ರಾಜಕಾರಣಿ: ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ

ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ
Published 19 ಮಾರ್ಚ್ 2024, 13:42 IST
Last Updated 19 ಮಾರ್ಚ್ 2024, 13:42 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ಪ್ರಧಾನಿ ನರೇಂದ್ರ ಮೋದಿ ಗಿಮಿಕ್ ರಾಜಕಾರಣಿ, ಇನ್ನು ಮುಂದೆ ಆಟ ನಡೆಯುವುದಿಲ್ಲ. ಕೋಮುವಾದಿ ಪಕ್ಷ ಬಿಜೆಪಿಗೆ ಈ ಬಾರಿ ಜನರು ತಕ್ಕ ಪಾಠ ಕಲಿಸುತ್ತಾರೆ’ ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಈಗಾಗಲೇ ಬಿಜೆಪಿ ವಿರುದ್ಧ ಜನರು ದಂಗೆ ಎದಿದ್ದಾರೆ. ಹಾಗಾಗಿ ಬಿಜೆಪಿ ಪಕ್ಷದ ಆಟ ಇನ್ನು ಮುಂದೆ ನಡೆಯುವುದಿಲ್ಲ. ಈ ಬಾರಿ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಈ ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಈ ಬಾರಿ ಜನರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದರಲ್ಲಿ ಅನುಮಾನವೇ ಇಲ್ಲ. ಚುನಾವಣೆ ಬಂದಾಗ ಮಾತ್ರ ಬಿಜೆಪಿಯವರಿಗೆ ಜನರು ನೆನಪಾಗುತ್ತಾರೆ. ಇಲ್ಲದಿದ್ದರೆ ಯಾವ ಸಂದರ್ಭದಲ್ಲಿಯೂ ಇವರಿಗೆ ಯಾರೂ ನೆನಪಾಗುವುದಿಲ್ಲ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಬಹಳ ಅನ್ಯಾಯ ಮಾಡಿದೆ. ಅದು ಈಗಾಗಲೇ ರಾಜ್ಯದ ಜನರಿಗೆ ಗೊತ್ತಿದೆ.  ಬಿಜೆಪಿಯವರಿಗೆ ಈ ಬಾರಿ ನಮ್ಮ ರಾಜ್ಯದಲ್ಲಿ ಸೋಲು ಖಚಿತ’ ಎಂದರು.

ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಸಚಿವ ಮಹದೇವಪ್ಪ  ನಿಭಾಯಿಸಲಿದ್ದಾರೆ. ಎಲ್ಲಾ ಶಾಸಕರು ಹಾಗೂ ಮಾಜಿ ಶಾಸಕರು ಸಚಿವ ಮಹದೇವಪ್ಪ ಅಭ್ಯರ್ಥಿಯಾದರೆ ಗೆಲುವುದು ಖಚಿತ. ಮಹದೇವಪ್ಪ ಅವರ ಹೆಸರನ್ನೇ ಸೂಚಿಸಿದ್ದಾರೆ. ಅಧಿಕೃತವಾಗಿ ಯಾರು ಎಂಬುದು ತಿಳಿಯುತ್ತದೆ. ಪಕ್ಷ ಯಾರಿಗೆ ಕೊಟ್ಟರೂ ಪ್ರಾಮಾಣಿಕವಾಗಿ ದುಡಿಯುವ ಕೆಲಸ ಮಾಡುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನನ್ನು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರು ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ’ ಎಂದರು.

ಈ ಸಂದರ್ಭದಲ್ಲಿ ಮುಖಂಡ ಕುಮಾರ್, ಮಹದೇವಪ್ಪ, ರಾಜೇಂದ್ರ, ರಾಜಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT