ಚಾಮರಾಜನಗರ: ‘ಸಾಕ್ಷರತೆ ದೇಶದ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಒಂದಾಗಿದ್ದು ಪ್ರತಿಯೊಬ್ಬರೂ ಶಿಕ್ಷಣ ಕಲಿಕೆಗೆ ಒತ್ತು ನೀಡಬೇಕು, ಅನಕ್ಷರಸ್ಥರು ಅಕ್ಷರ ಕಲಿತು ನವಸಾಕ್ಷರರಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಸಲಹೆ ನೀಡಿದರು.

ತಾಲ್ಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿಯ ಬೂದಿತಿಟ್ಟು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಸಾಕ್ಷರತಾ ಸಪ್ತಾಹ ಉದ್ಘಾಟಿಸಿ ಅವರು ಮಾತನಾಡಿದರು.

‘ವಿಶ್ವದಾದ್ಯಂತ ಸಾಕ್ಷರತಾ ದಿನ ಆಚರಿಸಲಾಗುತ್ತಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಯು ದೇಶದ ಪ್ರಗತಿಯಲ್ಲಿ ಬಹುಮುಖ್ಯ ಪಾತ್ರ ವಹಿಸಲಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ದೇಶದಲ್ಲಿ ಸಾಕ್ಷರರ ಸಂಖ್ಯೆ ಬಹಳ ಕಡಿಮೆ ಇತ್ತು. ಸ್ವಾತಂತ್ರ್ಯಾ ನಂತರ ಎಲ್ಲರನ್ನೂ ಸಾಕ್ಷರರನ್ನಾಗಿಸುವ ಪ್ರಯತ್ನಗಳು ನಡೆಯುತ್ತಿದೆ. ಪ್ರಸ್ತುತ ದೇಶ ಸಾಕ್ಷರತೆಯಲ್ಲಿ ಶೇ 75ರಷ್ಟು ಪ್ರಗತಿ ಸಾಧಿಸಿದೆ. ಕರ್ನಾಟಕ ರಾಜ್ಯ ಶೇ 70ರಷ್ಟು ಸಾಕ್ಷರತೆ ಹೊಂದಿದ್ದರೆ ಚಾಮರಾಜನಗರ ಜಿಲ್ಲೆಯಲ್ಲಿ ಸಾಕ್ಷರತೆಯ ಪ್ರಮಾಣ ಶೇ 61 ಇದೆ. ಲಿಂಕ್ ಡಾಕ್ಯುಮೆಂಟ್ ಕಾರ್ಯಕ್ರಮದಡಿ ಗ್ರಾಮಗಳನ್ನು ಆಯ್ಕೆ ಮಾಡಿ ಕಲಿಕಾ ತರಗತಿಗಳ ಮೂಲಕ ನವಸಾಕ್ಷರರ ಪ್ರಮಾಣ ಹೆಚ್ಚಿಸಬೇಕಿದೆ’ ಎಂದರು.

‘ಮುಂದಿನ 5 ವರ್ಷಗಳಲ್ಲಿ ದೇಶ ಸಂಪೂರ್ಣವಾಗಿ ಸಾಕ್ಷರವಾಗಬೇಕು ಎಂಬುದು ಅಂತರ ರಾಷ್ಟ್ರೀಯ ಸಾಕ್ಷರತಾ ದಿನದ ಉದ್ದೇಶವಾಗಿದೆ. ಶಿಕ್ಷಣ ಎಲ್ಲರ ಹಕ್ಕಾಗಿದ್ದು ವಂಚಿತರಾಗಬಾರದು. ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಮನೆಗೂ ಭೇಟಿ ನೀಡಿ ಶಿಕ್ಷಣವಂಚಿತರನ್ನು ಗುರುತಿಸಿ ಶಿಕ್ಷಣ ನೀಡಬೇಕು. ಅಭಿಯಾನ ಮಾದರಿಯಲ್ಲಿ ಶಿಬಿರ ಆಯೋಜಿಸಬೇಕು. ನಿರಂತರ ಕಲಿಕೆಯಿಂದ ಜನರ ಜೀವನಮಟ್ಟ ಸುಧಾರಿಸಲಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಸಲಹೆ ನೀಡಿದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆರ್.ಲಿಂಗರಾಜು ಮಾತನಾಡಿ, ‘ಜಿಲ್ಲೆಯಲ್ಲಿರುವ ಶಿಕ್ಷಣವಂಚಿತರನ್ನು ನವಸಾಕ್ಷರರನ್ನಾಗಿಸಲು ಲಿಂಕ್ ಡಾಕುಮೆಂಟ್ ಕಾರ್ಯಕ್ರಮದಡಿ ಕಳೆದ ಸಾಲಿನಲ್ಲಿ 1 ಸಾವಿರ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಂಡು ಸಮೀಕ್ಷೆ ನಡೆಸಲಾಗಿದ್ದು, 2025ರ ಜುಲೈಯಲ್ಲಿ ನಡೆದ ವಯಸ್ಕರ ಶಿಕ್ಷಣ ಪರೀಕ್ಷೆಯಲ್ಲಿ 2331 ಮಂದಿ ಅಕ್ಷರಸ್ಥರಾಗಿ ಉತ್ತೀರ್ಣರಾಗಿದ್ದಾರೆ. ಪ್ರಸ್ತುತ ಸಾಲಿನಲ್ಲಿ ಹನೂರು ತಾಲ್ಲೂಕಿನ ಅಜ್ಜೀಪುರ ಹಾಗೂ ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮ ಆಯ್ಕೆಯಾಗಿದ್ದು, 2,500 ಅನಕ್ಷರಸ್ಥರಿಗೆ ಬೋಧನೆ ನಡೆಯುತ್ತಿದೆ’ ಎಂದರು.

ವಯಸ್ಕರ ಶಿಕ್ಷಣ ಕಲಿಕಾ ಶಿಬಿರಗಳಿಂದ ನವಸಾಕ್ಷರರಾಗಿರುವವರಿಗೆ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಪ್ರಮಾಣಪತ್ರ ವಿತರಣೆ ಮಾಡಿದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕಾಶೀನಾಥ್, ಉಪನ್ಯಾಸಕ ನಾಗರಾಜು, ಮುಖ್ಯ ಶಿಕ್ಷಕ ಕೌರ್ಯ, ಬಿಆರ್ಸಿ ಸವಿತಾ, ಶಿವಮೂರ್ತಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಹೇಮಾ, ವಯಸ್ಕರ ಶಿಕ್ಷಣ ಇಲಾಖೆಯ ಸಹಾಯಕಿ ಶೋಭಾ ರಾಥೋಡ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಲಿಂಗರಾಜು ಕಾರ್ಯಕ್ರಮದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.