ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟಕ್ಕೆ ಬಿದ್ದ ಹಲ್ಲಿ: 70 ಮಕ್ಕಳು ಆಸ್ಪತ್ರೆಗೆ

Last Updated 10 ಜನವರಿ 2022, 10:15 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ):ತಾಲ್ಲೂಕಿನ ವಡಕೆಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿದ 70 ಮಕ್ಕಳನ್ನು ಕೌದಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ.

ಶಾಲೆಯಲ್ಲಿ 170 ಮಕ್ಕಳಿದ್ದಾರೆ. ಸೋಮವಾರ 90 ಮಂದಿ ಹಾಜರಾಗಿದ್ದಾರೆ. ಈ ಪೈಕಿ 70 ಮಕ್ಕಳು ಬಿಸಿಯೂಟ ಸೇವಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಸಿದ್ಧಪಡಿಸಿದ್ದ ಸಾಂಬಾರಿಗೆ ಹಲ್ಲಿ ಬಿದ್ದಿತ್ತು. ಇದು ಅರಿವಿಗೆ ಬಂದಾಗ,ಮಕ್ಕಳಿಗೆ ಊಟ ಮಾಡಿಯಾಗಿತ್ತು. ಕೆಲವು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಶಿಕ್ಷಕರು ಮಕ್ಕಳನ್ನು ಕೌದಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.

'ಬಿಸಿಯೂಟದಲ್ಲಿ ಹಲ್ಲಿ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆ ಎಲ್ಲಾ ಮಕ್ಕಳನ್ನು ಕೌದಳ್ಳಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಕ್ಕಳಿಗೆ ಏನೂ ಆಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಚಿಕಿತ್ಸೆ ನೀಡಲಾಗುತ್ತಿದೆ' ಎಂದು‌ ಶಾಲೆಯ ಮುಖ್ಯ ಶಿಕ್ಷಕ ಕೊಳಂದೈರಾಜ್ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT