ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನ, ಸ್ಥಳೀಯರ ಆಕ್ಷೇಪ

Published 16 ಆಗಸ್ಟ್ 2023, 6:42 IST
Last Updated 16 ಆಗಸ್ಟ್ 2023, 6:42 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್‌ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿರ್ಬಂಧವಿದ್ದರೂ ಕೆಲವರು ಅಧಿಕಾರ ದುರುಪಯೋಗಪಡಿಸಿಕೊಂಡು ಖಾಸಗಿ ವಾಹನದಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದು, ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಕಳೆದ ಒಂಬತ್ತು ವರ್ಷಗಳಿಂದ ಒಂದೂ ಖಾಸಗಿ ವಾಹನ ಬೆಟ್ಟದ ಮೇಲೆ ಹೋಗಿರಲಿಲ್ಲ. ಸೋಮವಾರ ಮಧ್ಯಾಹ್ನ ಮಂಡ್ಯದ ಶಾಸಕರು ಹಾಗೂ ಬೆಂಬಲಿಗರಿಗೆ ಪ್ರವೇಶಕ್ಕೆ ಅಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಸ್ಥಳೀಯ ಶಾಸಕರು ಈ ಹಿಂದೆ ಬೆಟ್ಟಕ್ಕೆ ಬಂದಿದ್ದ ಸಂದರ್ಭದಲ್ಲಿ ಇಡಿಸಿ (ಇಕೋ ಡೆವಲಪ್‌ಮೆಂಟ್‌ ಕಮಿಟಿ) ವಾಹನದಲ್ಲಿ ಹೋಗಿದ್ದಾರೆ. ಹೀಗೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಬೆಟ್ಟಕ್ಕೆ ಖಾಸಗಿ ವಾಹನ ಬಿಡುವುದಾದರೆ ಎಲ್ಲರಿಗೂ ಅವಕಾಶ ಕಲ್ಪಿಸಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಗೋಪಾಲಸ್ವಾಮಿ ವಲಯದ ಅರಣ್ಯಾಧಿಕಾರಿ ಮಂಜುನಾಥ್, ‘ಮಂಡ್ಯದ ಶಾಸಕರು ಬಂದಿದ್ದರಿಂದ ಖಾಸಗಿ ವಾಹನ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT