ಚಾಮರಾಜನಗರ: ಈಚೆಗೆ ನಡೆದ ಲೋಕ್ ಅದಾಲತ್ನಲ್ಲಿ ಜಿಲ್ಲೆಯಲ್ಲಿ 1,20,045 ಪ್ರಕರಣಗಳು ಇತ್ಯರ್ಥಗೊಂಡಿದ್ದು ಪ್ರಸಕ್ತ ವರ್ಷದಲ್ಲಿ 4 ಲಕ್ಷಕ್ಕೂ ಹೆಚ್ಚಿನ ಪ್ರಕರಣಗಳು ಅದಾಲತ್ನಲ್ಲಿ ಬಗೆಹರಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಜಿ.ಪ್ರಭಾವತಿ ಮಾಹಿತಿ ನೀಡಿದರು.

ನಗರದ ಜಿಲ್ಲಾ ನ್ಯಾಯಾಲಯದ ವಾಜ್ಯಪೂರ್ವ ಪರಿಹಾರ ಕೇಂದ್ರದಲ್ಲಿ ಮಂಗಳವಾರ ಮಾತನಾಡಿ ಕಳೆದ ಲೋಕ್ ಅದಾಲತ್ನಲ್ಲಿ 1,04,649 ಪ್ರಕರಣಗಳು ಇತ್ಯರ್ಥಗೊಂಡಿದ್ದವು, ಈ ಬಾರಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದು ಗಮನಾರ್ಹ. ಅದಾಲತ್ನಲ್ಲಿ 2,642 ನ್ಯಾಯಾಲಯ ಪ್ರಕರಣಗಳು ಹಾಗೂ 1,17,403 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥವಾಗಿವೆ ಎಂದರು.

ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ‘ಸರ್ವರಿಗೂ ನ್ಯಾಯ’ ಪರಿಕಲ್ಪನೆಯಡಿ ಜನಸಾಮಾನ್ಯರ ಅನುಕೂಲಕ್ಕಾಗಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುತ್ತಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರಗಳಲ್ಲಿ ಸಿವಿಲ್, ರಾಜಿ ಯೋಗ್ಯ ಕ್ರಿಮಿನಲ್ ಪ್ರಕರಣ ಸಹಿತ ಇತರೆ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಲಾಗಿದೆ ಎಂದರು.

ಈ ಬಾರಿಯ ಲೋಕ್ ಅದಾಲತ್ನಲ್ಲಿ ಚಾಮರಾಜನಗರ ತಾಲ್ಲೂಕಿನ 665, ಯಳಂದೂರು 230, ಕೊಳ್ಳೇಗಾಲ 1,089 ಹಾಗೂ ಗುಂಡ್ಲುಪೇಟೆಯ 658 ನ್ಯಾಯಾಲಯದ ಪ್ರಕರಣಗಳು ಮತ್ತು ಚಾಮರಾಜನಗರದ 89,503, ಯಳಂದೂರಿನ 3,261, ಕೊಳ್ಳೇಗಾಲದ 7,843 ಹಾಗೂ ಗುಂಡ್ಲುಪೇಟೆಯ 16.796 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಚೆಕ್ ಅಮಾನ್ಯ ಪ್ರಕರಣಗಳು, ಎಂ.ಇ.ಸಿ ಹಾಗೂ ಕಕ್ಷಿದಾರರಿಗೆ ಪರಿಹಾರ ರೂಪದಲ್ಲಿ ₹ 15.81 ಕೋಟಿ ಪರಿಹಾರ ಸಂಗ್ರಹಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದರು.

ರಾಜಿ ಯೋಗ್ಯ ಪ್ರಕರಣಗಳ ಇತ್ಯರ್ಥಕ್ಕಾಗಿ ಜನಸಾಮಾನ್ಯರು ಲೋಕ್ ಅದಾಲತ್ಗಾಗಿ ಕಾಯುವ ಅವಶ್ಯವಿಲ್ಲ. ನ್ಯಾಯಾಲಯದಲ್ಲಿ ‘ಮಧ್ಯಸ್ಥಿಕೆ ಶಿಬಿರ’ ಏರ್ಪಡಿಸಲಾಗಿದ್ದು ಬಗೆಹರಿಸಿಕೊಳ್ಳಬಹುದು. ವಿವಾಹ ವಿಚ್ಛೇದನ, ಪತಿ ಪತ್ನಿ ಕಲಹ, ಜೀವನಾಂಶ ಕೋರಿಕೆ ಹಾಗೂ ವಿಚ್ಚೇದನಾ ಪ್ರಕರಣ ದಾಖಲಾಗುವ ಮೊದಲಿನ ದೂರುಗಳು ಸೇರಿದಂತೆ ಜಿಲ್ಲೆಯಲ್ಲಿ 11 ಪ್ರಕರಣಗಳನ್ನು ಇತ್ಯರ್ಥಪಡಿಸಿ ಪತಿ-ಪತ್ನಿಯರನ್ನು ಒಂದುಗೂಡಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದರು.

ನ್ಯಾಯಾಲಯದ ಬಾಕಿ ರಾಜಿಯೋಗ್ಯ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳ ಕಕ್ಷಿದಾರರು ನ್ಯಾಯಾಧೀಶರು, ವಕೀಲರು ಹಾಗೂ ಸಂಧಾನಕಾರರಿಂದ ಲೋಕ್ ಅದಾಲತ್ ಬಗ್ಗೆ ಹೆಚ್ಚಿನ ಅರಿವು ಮೂಡಿಸಲಾಗಿತ್ತು. ಪರಿಣಾಮ 10ರಿಂದ15 ವರ್ಷಗಳಿಂದ ಬಾಕಿ ಇದ್ದ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ.

ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಾಗುವ ಮುನ್ನವೇ ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥವಾಗಿರುವುದು ಪ್ರಕರಣಗಳ ಹೊರೆ ತಗ್ಗಿಸಿದಂತಾಗಿದೆ. ಇದರಿಂದ ಕಕ್ಷಿದಾರರ ಸಮಯ, ಹಣ, ಉಳಿತಾಯವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಈಶ್ವರ್, ಮುಖ್ಯ ನ್ಯಾಯಿಕ ದಂಡಾಧಿಕಾರಿ ಸಿ.ಡಿ.ಪ್ರಕಾಶ್ ಈ ಸಂದರ್ಭ ಇದ್ದರು.

400432 ಪ್ರಕರಣ ಇತ್ಯರ್ಥ

ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರಗಳಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಯುವ ಲೋಕ್ ಅದಾಲತ್ ಅನ್ನು ವರ್ಷದಲ್ಲಿ 4 ಬಾರಿ ಹಮ್ಮಿಕೊಳ್ಳಲಾಗುತ್ತದೆ. ಇದೇ ವರ್ಷ ಮಾರ್ಚ್ 8ರಂದು ನಡೆದ ಲೋಕ್ ಅದಾಲತ್ನಲ್ಲಿ 74307 ಜುಲೈ 12ರಂದು ನಡೆದ ಅದಾಲತ್ನಲ್ಲಿ 101431 ಸೆ.13ರಂದು ನಡೆದ ಅದಾಲತ್ನಲ್ಲಿ 104649 ಮತ್ತು ಡಿ.13ರ ಅದಾಲತ್ನಲ್ಲಿ 120045 ಸೇರಿದಂತೆ ಈ ವರ್ಷ 400432 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಜಿಲ್ಲಾ ನ್ಯಾಯಾಧೀಶೆ ಜಿ. ಪ್ರಭಾವತಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.