ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರನ್ನು ವಂಚಿಸಿದ ಕೇಂದ್ರ ಸರ್ಕಾರ: ಶಾಸಕ ಎ.ಆರ್. ಕೃಷ್ಣಮೂರ್ತಿ

ಸುನೀಲ್ ಬೋಸ್ ಪರ ಮತಯಾಚನೆ
Published 8 ಏಪ್ರಿಲ್ 2024, 13:05 IST
Last Updated 8 ಏಪ್ರಿಲ್ 2024, 13:05 IST
ಅಕ್ಷರ ಗಾತ್ರ

ಸಂತೇಮರಹಳ್ಳಿ: ಕೇಂದ್ರ ಸರ್ಕಾರದ ಹತ್ತು ವರ್ಷದ ಆಡಳಿತ ಅವಧಿಯಲ್ಲಿ ಬಡವರ ಪರವಾದ ಯಾವುದೇ ಯೋಜನೆಗಳು ಜಾರಿಗೊಂಡಿಲ್ಲ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಆರೋಪಿಸಿದರು.

ಸಮೀಪದ ದೇಮಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸೋಮವಾರ ಮತ ಯಾಚಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಬಡವರು ಮತ್ತು ರೈತರನ್ನು ವಂಚಿಸುತ್ತಾ ಬಂದಿದೆ. ರೈತರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದಾಗ ಅವರನ್ನು ರಾಜಧಾನಿ ಒಳಗಡೆ ಬಿಟ್ಟುಕೊಳ್ಳದೇ ತೊಂದರೆ ನೀಡಿದೆ. ಸರ್ಕಾರಿ ಸ್ವಾಮ್ಯದಲ್ಲಿರುವ ಸಂಸ್ಥೆಗಳನ್ನು ನಾಶ ಮಾಡಿದ್ದಾರೆ. ಇದರಿಂದ ದೇಶದ ಯುವಕರಿಗೆ ಉದ್ಯೋಗವಿಲ್ಲದಂತಾಗಿದೆ. ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೇ ಮೀಸಲಾತಿ ಮತ್ತು ಸಂವಿಧಾನಕ್ಕೆ ಅಪಾಯ ಎದುರಾಗಲಿದೆ, ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ತಿರಸ್ಕರಿಸಬೇಕು ಎಂದರು.

ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ರಾಜ್ಯದ ಪ್ರತಿಯೊಂದು ಜಾತಿ ಧರ್ಮದ ಜನರಿಗೆ ಸೌಲಭ್ಯ ನೀಡಿದೆ. ನುಡಿದಂತೆ ನಡೆದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಅಲ್ಪ ಅವಧಿಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ಮಂಬರುವ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಬೇಕು. ಇದೇ ತಿಂಗಳು 12ರಂದು ಕೊಳ್ಳೇಗಾಲದಲ್ಲಿ ಕಾಂಗ್ರೆಸ್ ಪಕ್ಷದ ಸಮಾವೇಶ ನಡೆಯಲಿದೆ. ಹತ್ತು ಸಾವಿರ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾ ಮಂಪಚಾಯಿತಿ ಮಾಜಿ ಉಪಾಧ್ಯಕ್ಷ ಯೋಗೇಶ್, ಮಾಜಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಚಾಮೂಲ್ ನಿರ್ದೇಶಕ ಕಮರವಾಡಿ ರೇವಣ್ಣ, ಮುಖಂಡರಾದ ಪ್ರಭುಪ್ರಸಾದ್, ರಾಘವೇಂದ್ರ ಪ್ರಸಾದ್, ಪಶಿ, ಡಿ.ಪಿ.ಶಿವಕುಮಾರ್, ಶಿವನಾಗಪ್ಪ, ರಾಜು, ನಟರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT