ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿಗಳು ಐದು ವರ್ಷ ಮುಂದುವರಿಯಬೇಕಾದರೆ ಕಾಂಗ್ರೆಸ್‌ ಬೆಂಬಲಿಸಿ: ಯತೀಂದ್ರ

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿ.ಎಂಗೆ ರಾಜಕೀಯವಾಗಿ ಹೆಚ್ಚು ಶಕ್ತಿ
Published 27 ಜನವರಿ 2024, 14:19 IST
Last Updated 27 ಜನವರಿ 2024, 14:19 IST
ಅಕ್ಷರ ಗಾತ್ರ

ಗುಂಡ್ಲುಪೇಟೆ (ಚಾಮರಾಜನಗರ): ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆದ್ದರೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯವಾಗಿ ಹೆಚ್ಚು ಶಕ್ತಿ ಬರಲಿದೆ. ಇನ್ನೂ ಐದು ವರ್ಷಗಳ ಕಾಲ ಅವರು ಬಡವರು, ದಲಿತರು ಮತ್ತು ಮಹಿಳೆಯರ ಪರವಾಗಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗುತ್ತದೆ’ ಎಂದು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ‌.ಯತೀಂದ್ರ ಸಿದ್ದರಾಮಯ್ಯ ಶನಿವಾರ ಹೇಳಿದರು. 

ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರ ರಚನೆಯಾದ ಎಂಟು ತಿಂಗಳಲ್ಲೇ ಐದೂ ಗ್ಯಾರಂಟಿಗಳನ್ನು ಈಡೇರಿಸಲಾಗಿದೆ. ಈ ಗ್ಯಾರಂಟಿ ಯೋಜನೆಗಳು ಐದು ವರ್ಷಗಳ ಕಾಲ ಮುಂದುವರಿಯಬೇಕೆಂದರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಬೆಂಬಲ ಕೊಡಬೇಕು’ ಎಂದರು. 

ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ: ನಗರಾಭಿವೃದ್ಧಿ ಸಚಿವ ಬಿ.ಎಸ್‌.ಸುರೇಶ ಮಾತನಾಡಿ, ‘ಬಡವರ, ಹಿಂದುಳಿದ ಮತ್ತು ‌ಅಲ್ಪಸಂಖ್ಯಾತರ ಪರವಿರುವ  ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ‌ಕೆಳಗಿಳಿಸುವ ಹುನ್ನಾರ ನಡೆಯುತ್ತಿದೆ. ಆದರೆ, ಅದು ಸಫಲವಾಗುವುದಿಲ್ಲ’ ಎಂದರು. 

‘ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿರುವ ವ್ಯಕ್ತಿ ಎಂದರೆ, ಅದು ಸಿದ್ದರಾಮಯ್ಯ. ಕನಕದಾಸರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಅವರು, ಸಮ ಸಮಾಜ ನಿರ್ಮಾಣ ಮಾಡುವ ರಾಜಕಾರಣಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT