ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣ: ಶಾಸಕ ದರ್ಶನ್‌ ಧ್ರುವನಾರಾಯಣ್ ವಿಶ್ವಾಸ

Published 26 ಏಪ್ರಿಲ್ 2024, 15:20 IST
Last Updated 26 ಏಪ್ರಿಲ್ 2024, 15:20 IST
ಅಕ್ಷರ ಗಾತ್ರ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಪೂರಕ ವಾತಾವರಣವಿದ್ದು, ಪಕ್ಷದ ಅಭ್ಯರ್ಥಿ ಸುನಿಲ್‌ಬೋಸ್ ಅವರಿಗೆ ನಂಜನಗೂಡು ಕ್ಷೇತ್ರದಲ್ಲಿ ಹೆಚ್ಚು ಮತ ಸಿಗಲಿವೆ ಎಂದು ಶಾಸಕ ದರ್ಶನ್‌ ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಹೆಗ್ಗವಾಡಿಯಯಲ್ಲಿ ಸಹೋದರ ಧೀರನ್, ಪಕ್ಷದ ಮುಖಂಡರೊಂದಿಗೆ ಸರತಿ ಹಕ್ಕು ಚಲಾಯಿಸಿದ ನಂತರ ಮಾತನಾಡಿದ ಅವರು, ‘ದೇಶದಲ್ಲಿ ಅಭಿವೃದ್ದಿ ಬಯಸಿ, ಬದಲಾವಣೆ ಬಯಸಿ ಎಲ್ಲ ಸಮುದಾಯಗಳನ್ನು ಒಟ್ಟಿಗೆ ಕರೆದೊಯ್ಯುವ ಒಳ್ಳೆಯ ವ್ಯವಸ್ಥೆಗೆ ನಾವು ಮತದಾನ ಮಾಡಿದ್ದೇವೆ’ ಎಂದರು.

‘ಚಾಮರಾಜನಗರ ಲೋಕಸಭಾ ಕ್ಷೇತ್ರ ಹಿಂದೆ ಕಾಂಗ್ರೆಸ್ ಭದ್ರಕೋಟೆ ಆಗಿತ್ತು. ಆ ರೀತಿ ಮತ್ತೊಮ್ಮೆ ಅವಕಾಶ ಬಂದಿದೆ. ನಮ್ಮ ತಂದೆ ಇಲ್ಲಿ ಎರಡು ಬಾರಿ ಸಂಸದರಾಗಿದ್ದರು. ಕಳೆದ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಲ್ಲಿ ಸೋತರು. ಈ ಬಾರಿ ಜನರಿಗೆ ಒಳ್ಳೆಯ ಅವಕಾಶ ಸಿಗುತ್ತಿದೆ. ಜನ ಬದಲಾವಣೆ ಬಯಸಿ ಉತ್ತಮ ನಿರ್ಧಾರ ತಗೆದುಕೊಳ್ಳಲಿದ್ದಾರೆ’  ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆರೆಹಳ್ಳಿ ನವೀನ್‌, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರೇವಣ್ಣ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ರಾಜೇಶ ಗೌಡಹಳ್ಳಿ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT