ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಉಳಿಸಲು ಕಾಂಗ್ರೆಸ್‌ ಬೆಂಬಲಿಸಿ: ಮಂಜುನಾಥ್‌

Published 24 ಏಪ್ರಿಲ್ 2024, 4:15 IST
Last Updated 24 ಏಪ್ರಿಲ್ 2024, 4:15 IST
ಅಕ್ಷರ ಗಾತ್ರ

ಚಾಮರಾಜನಗರ: ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸುವುದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು ಬೆಂಬಲಿಸಬೇಕು ಎಂದು ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಪ್ರೊ.ರಾಮಚಂದ್ರ ಮಂಗಳವಾರ ಮನವಿ ಮಾಡಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಸಂಘಟನೆಯು ವಿವಿಧ ಪ್ರಗತಿಪರ ಸಂಘಟನೆಗಳೊಂದಿಗೆ ಸೇರಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಾ ಬಂದಿದೆ. ದೇಶದಲ್ಲಿ ಜನರ ಅಭಿವೃದ್ಧಿಗಳನ್ನು ಸರ್ಕಾರ ಮಾಡಬೇಕೇ ವಿನಾ, ಸರ್ಕಾರವೇ ಧಾರ್ಮಿಕ ಚಟುವಟಿಕೆಗಳನ್ನು ನಡೆಸುವುದು ಸರಿಯಲ್ಲಿ ಭಾರತದಲ್ಲಿ ಈಗ ಕೋಮುವಾದವನ್ನು ಬಿತ್ತಿ ದ್ವೇಷದ ಫಸಲು ಪಡೆಯುವ ಪ್ರಯತ್ನ ಸರ್ಕಾರದಿಂದ ನಡೆಯುತ್ತಿದೆ’ ಎಂದು ದೂರಿದರು.

ದೇಶದ ಸಂವಿಧಾನದ ಆಶಯಗಳನ್ನು ಭಗ್ನಗೊಳಿಸುವ ಯತ್ನಗಳೂ ನಡೆಯುತ್ತಿವೆ. ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿದೆ. ಇಎಸ್‌ಡಬ್ಲ್ಯು ಮೀಸಲಾತಿಯನ್ನು ಏಕಾಏಕಿ ಜಾರಿಗೆ ತಂದೆ ವಾಸ್ತವ ಮೀಸಲಾತಿ ವ್ಯವಸ್ಥೆಯನ್ನು ಬದಲಾಯಿಸಲು ಯತ್ನಿಸಲಾಗುತ್ತಿದೆ. ಕೇಂದ್ರದಲ್ಲಿ ಜನ, ರೈತ, ಕಾರ್ಮಿಕ, ಮಹಿಳಾ ವಿರೋಧಿ, ಕೋಮುವಾದಿ ಧರ್ಮಾಂಧ ಸರ್ಕಾರವಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. 

‘ಜಾತ್ಯತೀತ, ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾರ್ಯನಿರ್ವಹಿಸುವಂತಹ ಸರ್ಕಾರ ನಮಗೆ ಬೇಕು. ಸದ್ಯ ಕಾಂಗ್ರೆಸ್‌ ಸರ್ಕಾರ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ’ ಎಂದು ರಾಮಚಂದ್ರ ಹೇಳಿದರು. 

ವೇದಿಕೆಯ ಮೈಸೂರು ವಿಭಾಗದ ಸಂಚಾಲಕಿ ಲೀಲಾ ಸಂಪಿಗೆ ಮಾತನಾಡಿ, ‘ವೇದಿಕೆಯು ಸಂವಿಧಾನ ರಕ್ಷಿಸಿ, ಭಾರತ ಉಳಿಸಿ ಎಂಬ ಅಭಿಯಾನ ನಡೆಸುತ್ತಿದೆ. ದೇಶದಲ್ಲಿ ಮನು ಸಂವಿಧಾನ ಜಾರಿಗೆ ತರುವ ಹುನ್ನಾರ ನಡೆಯುತ್ತಿದೆ. ಇದು ಜಾರಿಯಾದರೆ ಮೊದಲಿಗೆ ಮಹಿಳೆ ಬಲಿ ಪಶುವಾಗುತ್ತಾಳೆ. ಆಕೆಯನ್ನು ಎರಡನೇ ದರ್ಜೆಯ ನಾಗರಿಕಳಂತೆ ನೋಡಲಾಗುತ್ತದೆ. ಇದೇ ಇದೇ ಸರ್ಕಾರ ಬಂದರೆ, ದುರ್ದಿನಗಳು ಕಾದಿವೆ’ ಎಂದರು. 

‘ಲಿಂಗಸಮಾನತೆಯ ಆಶಯ ಸಾಧಿಸಬೇಕಾದರೆ, ದೇಶದಲ್ಲಿ ಮಹಿಳಾ ವಿರೋಧಿ, ಕೋಮುವಾದಿ, ಮನುವಾದಿಗಳನ್ನು ಸೋಲಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಆಶಯಗಳ ಪರವಾಗಿರು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು’ ಎಂದರು. 

ವೇದಿಕೆಯ ಜಿಲ್ಲಾ ಸಂಚಾಲಕ ಸುಭಾಷ್‌ ಮಾಡ್ರಹಳ್ಳಿ ಮಾತನಾಡಿದರು. ಜಿಲ್ಲಾ ಮಹಿಳಾ ಸಂಚಾಲಕಿ ಶಾಂತಕುಮಾರಿ, ಪದಾಧಿಕಾರಿಗಳಾದ ಆರ್‌.ಸೋಮಣ್ಣ, ಸುನಿಲ್‌, ಜಲಂಧರ್‌, ಮಹೇಶ್‌ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT