ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕ ಅದಾಲತ್‌: 9,293 ಪ್ರಕರಣ ಇತ್ಯರ್ಥ

Last Updated 13 ಆಗಸ್ಟ್ 2022, 16:28 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ದಾಖಲೆಯ 9,293 ಪ್ರಕರಣಗಳು ಇತ್ಯರ್ಥವಾಗಿವೆ.

ಸರ್ವರಿಗೂ ನ್ಯಾಯ ಎಂಬ ಪರಿಕಲ್ಪನೆ ಅಡಿಯಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ಶೀಘ್ರವಾಗಿ ಹಾಗೂ ತ್ವರಿತವಾಗಿ ಪ್ರಕರಣವನ್ನು ಇತ್ಯರ್ಥವಾಗಬೇಕು ಎಂಬ ನಿಟ್ಟಿನಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಮೆಗಾ ಅದಾಲತ್‌ ಹಮ್ಮಿಕೊಳ್ಳಲಾಗಿತ್ತು.

ಸಂಜೆ 5 ಗಂಟೆಯವರೆಗಿನ ಮಾಹಿತಿ ಪ್ರಕಾರ, ಜಿಲ್ಲಾ ನ್ಯಾಯಾಲಯ ಸೇರಿದಂತೆ ಇತರ ನ್ಯಾಯಾಲಯಗಳಲ್ಲಿ ಬಾಕಿ ಇದ್ದ1,869 ಹಾಗೂ 7,424ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥವಾಗಿವೆ.

ಇಷ್ಟೂ ಪ‍್ರಕರಣಗಳಲ್ಲಿ ಎರಡೂ ಪಕ್ಷಗಾರರು ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಈ ಬಾರಿಯ ಅದಾಲತ್‌ನಲ್ಲಿ 15 ಸಾವಿರ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಹೊಂದಿತ್ತು.

ಶನಿವಾರದ ಮೆಗಾ ಲೋಕ ಅದಾಲತ್‌ ಯಶಸ್ವಿಯಾಗಿದೆ ಎಂದುಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್.ಭಾರತಿ ಹೇಳಿದ್ದು,ಇದಕ್ಕೆ ಶ್ರಮಿಸಿದಜಿಲ್ಲೆ ಎಲ್ಲಾ ನ್ಯಾಯಾಧೀಶರಿಗೆ, ವಕೀಲರಿಗೆ, ನ್ಯಾಯಾಲಯದ ಸಿಬ್ಬಂದಿಗೆ ಇತರೆ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT