ಪ್ರಸಕ್ತ ಸಾಲಿನಲ್ಲಿ ಮಳೆ ಕೊರತೆ
ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಮಳೆ ಕೊರತೆ ಇದ್ದು ಬಿತ್ತನೆ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ವಾಡಿಕೆ 451 ಮಿ.ಮೀ ಮಳೆಗೆ ಪ್ರತಿಯಾಗಿ 400 ಮಿ.ಮೀ ಮಾತ್ರ ಮಳೆ ಬಿದ್ದಿದ್ದು ಶೇ 12ರಷ್ಟು ಕೊರತೆ ಉಂಟಾಗಿದೆ. ಗುಂಡ್ಲುಪೇಟೆ ತಾಲ್ಲೂಕು ಹೊರತಾಗಿ ಉಳಿದ ತಾಲ್ಲೂಕುಗಳಲ್ಲಿ ಮಳೆ ಕೊರತೆ ಇದೆ. ಹನೂರಿನಲ್ಲಿ ಅತಿ ಕಡಿಮೆ ಮಳೆ ಬಿದ್ದಿದ್ದು ಬೆಳೆಗಳು ಒಣಗುತ್ತಿವೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಬೀದ್ ಮಾಹಿತಿ ನೀಡಿದರು.