ಮಹದೇಶ್ವರ ಬೆಟ್ಟ: ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರನ ದೇವಸ್ಥಾನದ ವ್ಯಾಪ್ತಿಯಲ್ಲಿ 2018ರಿಂದ 2025ರವರೆಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿರುವ ದೂರಿನ ಮೇರೆಗೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳ ತಂಡ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಡೆಸಿರುವ ಕಾಮಗಾರಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ‘ನಮ್ಮ ಕನ್ನಡಿಗರ ವಿಜಯ ಸೇನೆ’ಯ ರಾಜ್ಯ ಮುಖ್ಯ ಸಲಹೆಗಾರ ಬಿ.ಮೋಹನ್ ಕುಮಾರ್ ಎಂಬುವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಹಾಗೂ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

ಇಲ್ಲಿನ ವಜ್ರಮಲೆ ವಸತಿ ಗೃಹಕ್ಕೆ ಭೇಟಿನೀಡಿದ ಅಧಿಕಾರಿಗಳು ಅತಿಥಿ ಗೃಹದ ಎರಡನೇ ಹಂತದ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದರು. 416 ಕೊಠಡಿಗಳ ನಿರ್ಮಾಣಕ್ಕೆ ₹ 45 ಕೋಟಿ ಬಿಡುಗಡೆಯಾಗಿದ್ದು ಟೆಂಡರ್ ಅವಧಿ ಮುಕ್ತಾಯವಾಗಿದ್ದರೂ ಕಾಮಗಾರಿ ಮುಗಿಯದ ಬಗ್ಗೆ ಹಾಗೂ ಹೆಚ್ಚುವರಿ ಹಣ ಬಿಡುಗಡೆ ಮಾಡಿಕೊಂಡಿರುವ ಆರೋಪದ ಬಗ್ಗೆ ಮಾಹಿತಿ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ.

ವಸತಿ ಕೊಠಡಿಗಳ ಒಡೆದ ಕಿಟಕಿ ಗ್ಲಾಸ್, ಮರದ ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಿ ಮಾಹಿತಿ ಪಡೆದರು. ನಂತರ ಅಂತರಗಂಗೆ ಪಕ್ಕದಲ್ಲಿ ನಿರ್ಮಾಣ ಮಾಡಲಾಗಿರುವ ಸ್ನಾನಘಟ್ಟ ಕಾಮಗಾರಿ ವೀಕ್ಷಣೆ ಮಾಡಿದರು. ಪ್ರಾಧಿಕಾರದ ವತಿಯಿಂದ ದೀಪದಗಿರಿ ಒಡ್ಡಿನಲ್ಲಿ ಮಹದೇಶ್ವರರ 108 ಅಡಿಯ ಎತ್ತರದ ಪ್ರತಿಮೆ ನಿರ್ಮಾಣ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿ ವೀಕ್ಷಿಸಿದ ತಂಡ ಹಿಂದೆ ಸುತ್ತುಗೋಡೆ ಕುಸಿದು ಬಿದ್ದ ಬಗ್ಗೆ ಮಾಹಿತಿ ಪಡೆದುಕೊಂಡರು.

ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡವರಿಗೆ ಸಂಬಳ ಕಡಿತಗೊಳಿಸುವುದು, ವೇತನದ ಚೀಟಿ ನೀಡದಿರುವ ಆರೋಪಗಳ ಬಗ್ಗೆ ಪರಿಶೀಲಿಸಿ, ಪ್ರಾಧಿಕಾರದ ವತಿಯಿಂದ ಬಾಡಿಗೆಗೆ ನೀಡಲಾಗಿರುವ ಅಂಗಡಿ ಮಳಿಗೆಗಳ ಟೆಂಡರ್ ಪ್ರಕ್ರಿಯೆ ಬಗ್ಗೆಯೂ ಮಾಹಿತಿ ಪಡೆದರು. ಅವ್ಯವಹಾರ ಹಾಗೂ ಆರೋಪಗಳ ಕುರಿತು ಪ್ರಾಧಿಕಾರ ಉಪ ಕಾರ್ಯದರ್ಶಿ ಚಂದ್ರಶೇಖರ್ ಮತ್ತು ಪ್ರಾಧಿಕಾರದ ಎಂಜಿನಿಯರ್ ಸೆಲ್ವಂ ಗಣಪತಿ ಅವರಿಂದ ಉತ್ತರಗಳನ್ನು ಪಡೆದುಕೊಂಡರು. ಇದೇ ವೇಳೆ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಹಾಜರಾಗದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

ಲೋಕಾಯುಕ್ತ ಅಧಿಕಾರಿಗಳ ಭೇಟಿ ವೇಳೆ ನಮ್ಮ ಕನ್ನಡಿಗರ ವಿಜಯ ಸೇನೆ ಸಂಘಟನೆ ಸಂಘಟನಾ ಕಾರ್ಯದರ್ಶಿ ಪೊನ್ನಾಚಿ ರಾಜು, ಚಂದ್ರಶೇಖರ್, ರಾಮಚಂದ್ರ ಹಾಜರಿದ್ದು ಮಾಹಿತಿ ನೀಡಿದರು. ಈ ಸಂದರ್ಭ ಎಂಜಿನಿಯರ್ ಚಿನ್ನಮ್ಮ, ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ಪಿಎಸ್ಐ ಜಯರಾಮ್, ಎಎಸ್ಐ ಗುರುಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-37-995016822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.