ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಒಬ್ಬರು ಸಾವು

Published 8 ಜೂನ್ 2024, 8:13 IST
Last Updated 8 ಜೂನ್ 2024, 8:13 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಟ್ಟ ಸಮೀಪದ ತಾಳಬೆಟ್ಟದಲ್ಲಿ ನಡೆದಿದೆ.

ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ.

ಕೆ.ಆರ್.ನಗರ ತಾಲ್ಲೂಕಿನಚಂದಗಾಲ ಗ್ರಾಮದ ಒಂದೇ ಕುಟುಂಬದ ಮಾದೇವ ನಾಯ್ಕ (65) ಗೌರಮ್ಮ (60), ಲೀಲಾವತಿ (45), ರಿಷಿತ (21) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು. ಇದರಲ್ಲಿ ಮಾದೇವನಾಯ್ಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ನಾಲ್ವರೂ ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದು ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಶನಿವಾರ ಬೆಳಿಗ್ಗೆ ಸ್ವ ಗ್ರಾಮಕ್ಕೆ ಮರಳುವ ವೇಳೆ ತಾಳಬೆಟ್ಟದಲ್ಲಿ ಇಳಿದು ಒಂದು ಕಿಲೋ ಮೀಟರ್ ದೂರ ಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಕಾಲ್ನಡಿಗೆಯಲ್ಲಿ ಕ್ರಮಿಸಿ ಅತ್ಮ ಹತ್ಯೆಗೆ ಯತ್ನಿಸಿದ್ದಾರೆ.

ಎಲ್ಲರನ್ನೂ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಆತ್ಮಹತ್ಯೆ ಯತ್ನಕ್ಕೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಈ ಸಂಭಂದ ಮಹದೇಶ್ವರ ಬೆಟ್ಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT