ಮಹದೇಶ್ವರ ಬೆಟ್ಟ: ‘ಹಸಿರು ನಾಳೆ-ಎಂ.ಎಂ ಹಿಲ್ಸ್’ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿ ಶ್ರೀರೂಪಾ ಮಲೆ ಮಹದೇಶ್ವರ ಬೆಟ್ಟದಲ್ಲಿ ಘನ ತ್ಯಾಜ್ಯ ನಿರ್ವಹಣೆಯ ಯಂತ್ರೋಪಕರಣಗಳನ್ನು ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಅವರು, ಪವಿತ್ರ ಯಾತ್ರಾ ಸ್ಥಳವಾಗಿರುವ ಮಹದೇಶ್ವರ ಬೆಟ್ಟದಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಹಾಗೂ ಪ್ಲಾಸ್ಟಿಕ್ ಸಹಿತ ಪರಿಸರಕ್ಕೆ ಮಾಲಿನ್ಯಕಾರಕ ವಸ್ತುಗಳನ್ನು ವೈಜ್ಞಾನಿಕವಾಗಿ ವಿಂಗಡಿಸಿ, ಸಂಸ್ಕರಣೆ ಮಾಡಿ ವಿಲೇವಾರಿ ಮಾಡಲು ಯಂತ್ರೋಪಕರಣಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.

ಮಾದಪ್ಪನ ಸನ್ನಿಧಿಯಾಗಿರುವ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಹಾಗೂ ಪರಿಸರ ಸ್ನೇಹಿ ತಾಣವನ್ನಾಗಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ. ಸಾಮೂಹಿಕ ಹಾಗೂ ಸಂಘಟಿತ ಪ್ರಯತ್ನವು ಬೆಟ್ಟದ ನೈಸರ್ಗಿಕ ಸೌಂದರ್ಯವನ್ನು ಕಾಪಾಡುವಲ್ಲಿ ಪ್ರಮುಖ ಹೆಜ್ಜೆಯಾಗಲಿದೆ ಎಂದರು.

ಈ ಸಂದರ್ಭ ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಮೈಕಾಪ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕ ಅಶ್ರಫುಲ್ ಹಸನ್, ಗ್ರಾಮ ಪಂಚಾಯಿತಿ ಪಿಡಿಒ ಕಿರಣ್, ಜಾಗೃತ್ ಟೆಕ್ ಪ್ರೈವೇಟ್ ಲಿಮಿಟೆಡ್ ನಿರ್ದೇಶಕರು ಹಾಗೂ ಮಂಗಳೂರಿನ ಮಿನಿ ಟೆಕ್ ಸಂಸ್ಥೆಯ ಪ್ರತಿನಿಧಿಗಳು, ಪೌರಕಾರ್ಮಿಕರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-37-1322049833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.