ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದೇಶ್ವರ ಬೆಟ್ಟ: ಪೂಜೆ ಮಾಡುತ್ತಿದ್ದಾಗ ಕುಸಿದು ಬಿದ್ದು ಅರ್ಚಕ ಸಾವು

Last Updated 19 ಜುಲೈ 2022, 6:17 IST
ಅಕ್ಷರ ಗಾತ್ರ

ಮಲೆಮಹದೇಶ್ವರ ಬೆಟ್ಟ (ಚಾಮರಾಜನಗರ): ಇಲ್ಲಿನ ಖ್ಯಾತ ಪ್ರವಾಸಿ ಸ್ಥಳ ಮಲೆ‌ಮಹದೇಶ್ವರ ಸ್ವಾಮಿ ದೇವಾಲಯದ ಅರ್ಚಕರೊಬ್ಬರು ಮಂಗಳವಾರ ಮುಂಜಾನೆ ಮಹದೇಶ್ವರ ಸ್ವಾಮಿಗೆ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಕುಸಿದು‌ಬಿದ್ದು ಮೃತಪಟ್ಟಿದ್ದಾರೆ.

ನಾಗಣ್ಣ (40) ಮೃತ ಪಟ್ಟ ಅರ್ಚಕ. ಒಂದೂವರೆ ವರ್ಷದ ಬಳಿಕ ಇವರಿಗೆ ಮಹದೇಶ್ವರನಿಗೆ ಪೂಜೆ ಸಲ್ಲಿಸುವ ಸರದಿ ಬಂದಿತ್ತು. ಮಂಗಳವಾರ ಬೆಳಿಗ್ಗೆ 4 ಗಂಟೆಗೆ ತೆರಳಿ ಪೂಜೆ ಮಾಡುವಾಗ ಹಠಾತ್ತಾಗಿ ಕುಸಿದು ಬಿದ್ದಿದ್ದಾರೆ.

ತಕ್ಷಣವೇ ಅವರನ್ನು ಆಂಬುಲೆನ್ಸ್‌ನಲ್ಲಿ ಹನೂರು ಸರ್ಕಾರಿ ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆ ಅಸುನೀಗಿದರು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT