ಹನೂರು: ತಾಲ್ಲೂಕಿನ ಮಹದೆಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ಭಕ್ತರು ಕಾಲ್ನಡಿಗೆಯಲ್ಲಿ ಕಾವೇರಿ ನದಿ ದಾಟಿ ಬರುವ ಸ್ಥಳಕ್ಕೆ ಶನಿವಾರ ಜಿಲ್ಲಾಧಿಕಾರಿ ನೇತೃತ್ವದ ತಂಡ ಬೇಟಿ ನೀಡಿ ಪರಿಸೀಲಿಸಿತು.

ಫೆ.14 ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಶಿವರಾತ್ರಿ ಜಾತ್ರೆಗೆ ಭಕ್ತರು ಕಾಲ್ನಡಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಪೈಕಿ ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ಮಂಡ್ಯ ಜಿಲ್ಲೆಯ ಸಾವಿರಾರು ಭಕ್ತರು ಕಾವೇರಿ ನದಿ ದಾಟಿ ಸಂಗಮದ ಮೂಲಕ ಹಾದು ಬಸವನಕಡ ತಲುಪಿ ನಂತರ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದ ಮೂಲಕ ಶಾಗ್ಯ, ಹಲಗಾಪುರ, ತೋಮಿಯಾರ್ ಪಾಳ್ಯ, ಡಿ ಎಂ ಸಮುದ್ರದ ಮೂಲಕ ಎಲ್ಲೇಮಾಳ ತಲುಪಿ ಮಲೆ ಮಹದೇಶ್ವರ ಮುಖ್ಯ ರಸ್ತೆಯ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಾರೆ. ಹೀಗಾಗಿ ಶನಿವಾರ ಜಿಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಬಸವನಕಡ ಎಂಬ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಜಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಈ ಬಾರಿಯೂ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ನಿರೀಕ್ಷೆಗೂ ಮೀರಿ ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಕೆಆರ್ಎಸ್ ಜಲಾಶಯದಿಂದ ನೀರಿನ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಭಕ್ತರು ಅರಣ್ಯ ಪ್ರದೇಶದ ಮೂಲಕ ತೆರಳುವುದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಪಾದಯಾತ್ರೆ ತೆರಳುವ ಮಾರ್ಗದಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಕಾವೇರಿ ನದಿಯನ್ನು ದಾಟಿ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ ತೆರಳಬೇಕಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಎಸ್ಟಿಆರ್ಎಫ್ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು ಹೆಚ್ಚು ನಿಯೋಜಿಸಬೇಕು. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಭಕ್ತಾದಿಗಳು ಸಹ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುವುದರಿಂದ ಬೆಳಕು ಇರುವ ಸಮಯದಲ್ಲಿ ಮಾತ್ರ ತಾವು ಪಾದಯಾತ್ರೆ ಮಾಡಬೇಕು. ತಮ್ಮ ಆಚಾರ ವಿಚಾರ ಸಂಸ್ಕೃತಿಗಳಿಗೆ ಯಾವುದೇ ಧಕ್ಕೆಯಾಗದಂತೆ ಎಲ್ಲ ರೀತಿಯ ಕ್ರಮ ವಹಿಸಲಾಗುವುದು. ಭಕ್ತರು ಸಹ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಗೆ ಕೈಜೋಡಿಸುವ ಮೂಲಕ ತಮ್ಮ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕು. ನಾವು ನಿಮಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದು ಶ್ರೀರೂಪ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಲೆ ಮಹದೇಶ್ವರ ವನ್ಯ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಎಸಿಎಫ್ಗಳಾದ ವಿರಾಜ್ ಹೊಸೂರು, ಮರಿಸ್ವಾಮಿ, ತಹಶೀಲ್ದಾರ್ ಚೈತ್ರ, ಡಿವೈಎಸ್ಪಿ ಧರ್ಮೇಂದ್ರ ಇನ್ಸ್ಪೆಕ್ಟರ್ ಆನಂದಮೂರ್ತಿ, ಆರ್ಎಫ್ಒ ನಿರಂಜನ್, ಕಂದಾಯ ನಿರೀಕ್ಷಕ ಮಲ್ಲೇಶ್, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಇದ್ದರು.

ಪಾದಯಾತ್ರೆ ಮಾರ್ಗದಲ್ಲಿ ನೀರಿನ ವ್ಯವಸ್ಥೆ ಭದ್ರತೆಗಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಇಲಾಖೆಯೊಂದಿಗೆ ಸಹಕರಿಸಲು ಮನವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.