ಐದು ದಿನಗಳ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಕ್ತರಿಗೆ ಶೌಚಾಲಯ ಕುಡಿಯುವ ನೀರು ದೇವರ ದರ್ಶನಕ್ಕೆ ನೆರಳಿನ ವ್ಯವಸ್ಥೆ ಸರದಿ ಸಾಲು ನಿರಂತರ ಅನ್ನ ದಾಸೋಹ ವ್ಯವಸ್ಥೆ ಮಾಡಲಾಗಿದೆ. 2 ಲಕ್ಷ ಲಾಡುಗಳನ್ನು ಪ್ರಸಾದವಾಗಿ ವಿತರಿಸಲು ದಾಸ್ತಾನು ಮಾಡಲಾಗಿದೆ. 4 ರಿಂದ 5 ಲಕ್ಷ ಲಾಡುಗಳು ಮಾರಾಟವಾಗುವ ನಿರೀಕ್ಷೆ ಇದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದರು.