ದ್ವಿಚಕ್ರವಾಹನಗಳಿಗೆ ನಿರ್ಬಂಧ
ಈ ಮಧ್ಯೆ ಮಹಾಲಯ ಅಮಾವಾಸ್ಯೆ ಜಾತ್ರೆಯಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ಇರುವುದರಿಂದ ಬೆಟ್ಟದ ರಸ್ತೆಯಲ್ಲಿ ವಾಹನಗಳ ದಟ್ಟಣೆ ತಡೆಯುವ ಉದ್ದೇಶದಿಂದ ಬುಧವಾರ ಸಂಜೆ 6 ಗಂಟೆಯಿಂದ 15ರ ಸಂಜೆ 7 ಗಂಟೆಯವರೆಗೆ ಕೌದಳ್ಳಿ ಗ್ರಾಮ ಪ್ರಕಾಶ್ ಗಾರ್ಡನ್‌ನಿಂದ ಬೆಟ್ಟದವರೆಗೆ ದ್ವಿಚಕ್ರವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ ಹೊರಡಿಸಿದ್ದಾರೆ. ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಾತ್ರೆಯ ಸಂದರ್ಭದಲ್ಲಿ ಬೆಟ್ಟ ರಸ್ತೆಯ ತಿರುವುಗಳಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿದ್ದವು. ದ್ವಿಚಕ್ರ ವಾಹನ ಸವಾರರಿಗೆ ಹೆಚ್ಚು ತೊಂದರೆ ಅನುಭವಿಸುತ್ತಿದ್ದರು. ಈ ಕಾರಣಕ್ಕೆ ಕಳೆದ ವರ್ಷದಿಂದ ಜಾತ್ರಾ ಸಮಯದಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿಷೇಧಿಸುತ್ತಿದೆ.