ಮಂಗಳವಾರ, ಮಾರ್ಚ್ 21, 2023
28 °C

ಬಂಡೀಪುರ: ಗಂಡು ಹುಲಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗದ ಗುಂಡ್ರೆ ವಲಯದ ನಾಯಳ್ಳ ಗಸ್ತಿನ ಸುತ್ತನಹಳ್ಳಿ ಪ್ರದೇಶದಲ್ಲಿ ಗಂಡು ಹುಲಿಯೊಂದು ಮೃತಪಟ್ಟಿದೆ. 

ಹುಲಿಗೆ ನಾಲ್ಕರಿಂದ ಐದು ವರ್ಷವಾಗಿರಬಹುದು ಎಂದು ಅಂದಾಜಿಸಲಾಗಿದೆ. 

ಬೇರೊಂದು ಹುಲಿಯ ಜೊತೆಗೆ ನಡೆದ ಕಾದಾಟದಲ್ಲಿ ಹುಲಿಯ ಮುಂಭಾಗದ ಎಡಗಾಲು ಹಾಗೂ ಕಣ್ಣಿನ ಭಾಗದಲ್ಲಿ ಗಾಯವಾಗಿರುವುದನ್ನು ಗುಂಡ್ರೆ ವಲಯದ ಸಿಬ್ಬಂದಿ ಹಾಗೂ ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿ ಗುರುವಾರ ಗಮನಿಸಿದ್ದರು. ಇದನ್ನು ಅವರು ಅಧಿಕಾರಿಗಳ ಗಮನಕ್ಕೆ ತಂದಿದ್ದರು. 

ತಕ್ಷಣ ಹುಲಿಯ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಬೋನನ್ನು ಇರಿಸಲಾಗಿತ್ತು. ಆದರೆ ಹುಲಿ ಬೋನಿಗೆ ಬಿದ್ದಿಲ್ಲ. ಹಾಗಾಗಿ, ಅರಿವಳಿಕೆ ಚುಚ್ಚುಮದ್ದು ನೀಡಿ ಅದನ್ನು ಸೆರೆ ಹಿಡಿಯಲು ಅಧಿಕಾರಿಗಳು ತೀರ್ಮಾನಿಸಿದ್ದರು. 

‘ವೈದ್ಯ ವಾಸೀಂ ಮಿರ್ಜಾ ಅವರು ಶುಕ್ರವಾರ ಹುಲಿಗೆ ಅರಿವಳಿಕೆ ಚುಚ್ಚುಮದ್ದು ಹೊಡೆಯಲು ಯಶಸ್ವಿಯಾದರು. ತೀವ್ರವಾಗಿ ಗಾಯಗೊಂಡಿದ್ದ ಹುಲಿಗೆ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟ ಮೃಗಾಲಯಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ಮೃತಪಟ್ಟಿದೆ’ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್‌.ಆರ್‌.ನಟೇಶ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ವನ್ಯಜೀವಿ ವಾರ್ಡನ್‌ ಕೃತಿಕ ಆಲನಹಳ್ಳಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ರವಿಕುಮಾರ್‌, ವಲಯ ಅರಣ್ಯಾಧಿಕಾರಿ ಶಶಿಧರ್ ಸಿಬ್ಬಂದಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು