ಚಾಮರಾಜನಗರ: ಬಾಲಕಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಹಾಗೂ ಆಕೆಯ ರಕ್ಷಣೆಗೆ ಬಂದವರ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಯಳಂದೂರು ತಾಲ್ಲೂಕಿನ ಯೋಗೇಶ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2018ರ ಮಾರ್ಚ್ 26ರಂದು ಘಟನೆ ನಡೆದಿತ್ತು.

12 ವರ್ಷ ಬಾಲಕಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಯೋಗೇಶ್ ಆಕೆಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದ. ಈ ಸಂದರ್ಭದಲ್ಲಿ ಬಾಲಕಿ ಹಾಗೂ ಆಕೆಯನ್ನು ರಕ್ಷಿಸಲು ಬಂದಿದ್ದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ.

ಪೊಕ್ಸೊ ಅಡಿಯಲ್ಲಿ ಪ್ರಕಣ ದಾಖಲಿಸಿದ್ದ ಪೊಲೀಸರು,ತನಿಖೆ ನಡೆಸಿ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದರು.

ಆರೋಪಗಳು ಸಾಬೀತಾಗಿರುವುದರಿಂದಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್. ಸುಲ್ತಾನ್ ಪುರಿ ಅವರು ಯೋಗೇಶ್‌ಗೆ ಐದು ವರ್ಷಗಳ ಶಿಕ್ಷೆ ಹಾಗೂ ₹25,500 ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ₹1 ಲಕ್ಷ ಪರಿಹಾರ ನೀಡಲು ಆದೇಶಿಸಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ಪೊಕ್ಸೊ ಕಾಯ್ದೆಯ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಯೋಗೇಶ್ ಅವರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.