ಚಾಮರಾಜನಗರ: ಬಾಲಕಿಗೆಲೈಂಗಿಕ ಹಲ್ಲೆ ಮತ್ತು ಕಿರುಕುಳ ನೀಡಿದ ವ್ಯಕ್ತಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ.

ಗುಂಡ್ಲುಪೇಟೆಯ ಕುಮಾರ್ ಅಲಿಯಾಸ್ ಧ್ರುವ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2019ರ ಫೆಬ್ರುವರಿ 17ರಂದು ಈ ಘಟನೆ ನಡೆದಿತ್ತು.

ಕುಮಾರ್, 17 ವರ್ಷದ ಬಾಲಕಿಯನ್ನು ತಿರುಪತಿಗೆ ಕರೆದುಕೊಂಡು ಹೋಗಿದ್ದ. ರೈಲಿನಲ್ಲಿ ವಾಪಸ್ ಬರುತ್ತಿರುವಾಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿದ್ದ. ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸರು ಕುಮಾರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ಎಲ್ಲ ಆರೋಪಗಳು ಸಾಬೀತಾಗಿರುವ ಕಾರಣ, ಕುಮಾರ್‌ನನ್ನು ಅಪರಾಧಿ ಎಂದು ಘೋಷಿಸಿರುವ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸದಾಶಿವ ಎಸ್.ಸುಲ್ತಾನ್‌ಪುರಿ ಅವರು, ಆತನಿಗೆ ಐದು ವರ್ಷಗಳ ಸಾದಾ ಶಿಕ್ಷೆ ಹಾಗೂ ₹1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ರೂಪದಲ್ಲಿ ₹1 ಲಕ್ಷ ನೀಡಲೂ ಅವರು ಆದೇಶಿಸಿದ್ದಾರೆ.

ಪ್ರಾಸಿಕ್ಯೂಷನ್ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಯೋಗೇಶ್ ಅವರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.