ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶವ ಸಂಸ್ಕಾರಕ್ಕೆ ಹೋಗಿದ್ದಾಗ ಹೆಜ್ಜೇನು ದಾಳಿ, ವ್ಯಕ್ತಿ ಸಾವು

Published 17 ಸೆಪ್ಟೆಂಬರ್ 2023, 16:57 IST
Last Updated 17 ಸೆಪ್ಟೆಂಬರ್ 2023, 16:57 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ): ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಶನಿವಾರ ಶವಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಚೆನ್ನಪ್ಪ (60) ಎಂಬುವವರು ಮೃತಪಟ್ಟು 14 ಮಂದಿ ಗಾಯಗೊಂಡಿದ್ದಾರೆ.

ಕೊಂಗರಹಳ್ಳಿ ಗ್ರಾಮದ ಮೂಡಲ ಬೀದಿಯ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಭಾನುವಾರ ಮಧ್ಯಾಹ್ನದ ಸಮಯದಲ್ಲಿ ಸಂಬಂಧಿಕರು ಹಾಗೂ ಕುಟುಂಬಸ್ಥರು ಶವಸಂಸ್ಕಾರಕ್ಕೆ ಹೋಗಿದ್ದರು. ಮೃತಶರೀರಕ್ಕೆ ಪೂಜೆ ಸಲ್ಲಿಸಿ ಚಿತೆಗೆ ಬೆಂಕಿ ಹಾಕುತ್ತಿದ್ದಂತೆ ಮರದ ಮೇಲಿದ್ದ ಹೆಜ್ಜೇನುಗಳು 15ಕ್ಕೂ ಹೆಚ್ಚು ಮಂದಿಯ ಮೇಲೆ ದಾಳಿ ಮಾಡಿವೆ.

ಈ ಪೈಕಿ ಚೆನ್ನಪ್ಪ ಅವರು ತೀವ್ರವಾಗಿ ಅಸ್ವಸ್ಥಗೊಂಡರು. ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ. ಉಳಿದ 14 ಮಂದಿ ಹೋಲಿ ಕ್ರಾಸ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪೈಕಿ ಒಬ್ಬರು ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT