ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 7 ವರ್ಷ ಕಠಿಣ ಶಿಕ್ಷೆ

Last Updated 3 ಡಿಸೆಂಬರ್ 2022, 15:53 IST
ಅಕ್ಷರ ಗಾತ್ರ

ಚಾಮರಾಜನಗರ: ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಯುವಕನಿಗೆ ನಗರದ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಏಳು ವರ್ಷ ಕಠಿಣ ಶಿಕ್ಷೆ ವಿಧಿಸಿ ಶನಿವಾರ ಆದೇಶಿಸಿದೆ.

ತಾಲ್ಲೂಕಿನ ಮರಿಯಾಲ ಗ್ರಾಮದ ಪುಟ್ಟರಾಜು ಶಿಕ್ಷೆಗೆ ಗುರಿಯಾದ ವ್ಯಕ್ತಿ 2017ರ ಮೇ 18ರಂದು ಘಟನೆ ನಡೆದಿತ್ತು. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪುಟ್ಟರಾಜು ವಿರುದ್ಧ ಪೋಕ್ಸೊ ಅಡಿ ಪ್ರಕರಣ ದಾಖಲಾಗಿತ್ತು.

ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಬಾಲಕಿ ಬೇಡ ಎಂದು ಹೇಳಿದರೂ ಕೇಳದೆ, ಪುಟ್ಟರಾಜು ಆಕೆಯನ್ನು ಬಲವಂತವಾಗಿ ಬೈಕ್ ನಲ್ಲಿ ಕರೆದುಕೊಂಡು ಹೋಗಿ ಬಿಳಿಗಿರಿರಂಗನಬೆಟ್ಟ ಹಾಗೂ ವಿವಿಧ ಕಡೆಗಳಲ್ಲಿ ಸುತ್ತಾಡಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದರು.

ಆರೋಪ ಸಾಬೀತಾಗಿರುವುದರಿಂದ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಎ. ಸಿ. ನಿಶಾರಾಣಿ ಅವರು ಪುಟ್ಟರಾಜುವಿಗೆ ಪೋಕ್ಸೋ ಕಾಯ್ದೆಯಡಿ 7 ವರ್ಷ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

ಅಲ್ಲದೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಸಂತ್ರಸ್ತ ಬಾಲಕಿಗೆ ಪರಿಹಾರ ರೂಪದಲ್ಲಿ ₹2 ಲಕ್ಷ ಹಣವನ್ನು 30 ದಿನಗಳ ಒಳಗಾಗಿ ನೀಡಬೇಕು ಎಂದು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT