ಮಹದೇಶ್ವರ ಬೆಟ್ಟ: ಗುಜರಾತ್ ಪ್ರವಾಸಿಗರ ಬಸ್ ಉರುಳಿ 15 ಜನರಿಗೆ ಗಾಯ

ಹನೂರು (ಚಾಮರಾಜನಗರ): ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಗುಜರಾತ್ ಪ್ರವಾಸಿಗರಿದ್ದ ಬಸ್ ಪಾಲರ್ ಬಳಿ ಬುಧವಾರ ಬೆಳಿಗ್ಗೆ ಉರುಳಿ ಬಿದ್ದಿದ್ದು, 15 ಜನರು ಗಾಯಗೊಂಡಿದ್ದಾರೆ.
ತಮಿಳುನಾಡಿನಿಂದ ಪ್ರವಾಸ ಮುಗಿಸಿಕೊಂಡು ಪಾಲಾರ್ ಮೂಲಕ ರಾಜ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಬುಧವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಪಾಲಾರ್ ರಸ್ತೆಯ ಎರಡನೇ ತಿರುವು ಬಳಿ ಬಸ್ ಚಾಲಕನ ನಿಯಂತ್ರಣಕ್ಕೆ ಸಿಗದೆ ಉರುಳಿ ಬಿದ್ದಿದೆ. ಬಸ್ಸಿನಲ್ಲಿ ಒಟ್ಟು 50 ಜನರಿದ್ದು, ಈ ಪೈಕಿ 15 ಜನರಿಗೆ ಗಾಯಗಳಾಗಿವೆ.
ಗಾಯಾಳುಗಳಿಗೆ ಮಹದೇಶ್ವರ ಬೆಟ್ಟ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.