ಹನೂರು (ಚಾಮರಾಜನಗರ): ತಾಲ್ಲೂಕಿನ ಪಿ.ಜಿ.ಪಾಳ್ಯ ಬಳಿ ಕೆಎಸ್ಆರ್ಟಿಸಿ ಬಸ್ ಹಳ್ಳಕ್ಕೆ ಉರುಳಿ ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಮಾಳಿಗನತ್ತ ಗ್ರಾಮದ ಶಿವಮ್ಮ(60) ಹಾಗೂ ಪಿ.ಜಿ.ಪಾಳ್ಯದ ರಮೇಶ್ (50) ಮೃತಪಟ್ಟವರು.

ಸೋಮವಾರ ಮಧ್ಯಾಹ್ನ ಕೊಳ್ಳೇಗಾಲದಿಂದ ಬೈಲೂರಿಗೆ ಸಂಚರಿಸುತ್ತಿದ್ದ ಬಸ್, ಕುಡುವಾಳೆ ಹಾಗೂ ಮಾಳಿಗನತ್ತದ ನಡುವಿನ ಮುಳುಗು ಸೇತುವೆಯಿಂದ ಹಳ್ಳಕ್ಕೆ ಉರುಳಿ ಬಿದ್ದಿದೆ.

ಬಸ್ಸಿನಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಸ್ ಬಲಭಾಗಕ್ಕೆ ಉರುಳಿ ಬಿದ್ದಿದ್ದರಿಂದ ಬಲಭಾಗದಲ್ಲಿ ಕುಳಿತಿದ್ದ ಪ್ರಯಾಣಿಕರಿಗೆ ಹೆಚ್ಚು ಏಟಾಗಿದೆ. ಎಂಟು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

’ಬಸ್ನಲ್ಲಿ ಯಾವುದೇ ತಾಂತ್ರಿಕ ದೋಷ ಉಂಟಾಗಿಲ್ಲ. ಚಾಲಕನ ಅಜಾಗರೂಕರೆಯಿಂದ ಅಪಘಾತ ಸಂಭವಿಸಿದೆ‘ ಎಂದು ಕೆಎಸ್ಆರ್ಟಿಸಿ ಚಾಮರಾಜನಗರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ ಬಿ. ಅವರು ’ಪ್ರಜಾವಾಣಿ‘ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.