ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಸಂಭ್ರಮದ ಮಾರಮ್ಮನ ಹಬ್ಬ

Published 29 ಫೆಬ್ರುವರಿ 2024, 14:22 IST
Last Updated 29 ಫೆಬ್ರುವರಿ 2024, 14:22 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಗ್ರಾಮದ ಗ್ರಾಮದೇವತೆ ಮಾರಮ್ಮನ ಹಬ್ಬ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ದೇವಾಲಯದ ಆವರಣದಲ್ಲಿ ವಿವಿಧ ಹೋಮ ನಡೆದು, ದೇವಿಗೆ ವಿಶೇಷ ಅಭಿಷೇಕ ನಡೆಯಿತು. ನಂತರ ವಿವಿಧ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು.

ಗ್ರಾಮದ ಚಾವಡಿ, ಸಮುದಾಯ ಭವನ ಮತ್ತು ಮಾರಮ್ಮನ ಗುಡಿ ಆವರಣದಲ್ಲಿ ಸೇರಿದ ಗ್ರಾಮಸ್ಥರು ಗ್ರಾಮ ದೇವತೆಗೆ ತಂಬಿಟ್ಟಿನ ಸೇವೆ ಸಲ್ಲಿಸಿ, ತುಪ್ಪದ ದೀಪವನ್ನು ಬೆಳಗಿಸಿ ಮಹಿಳೆಯರೆಲ್ಲಾ ಒಟ್ಟಾಗಿ ಬಂದು ಪೂಜೆ ಸಲ್ಲಿಸಿದರು.

ಹರಕೆ ಹೊತ್ತ ಮಹಿಳೆಯರು, ಮಕ್ಕಳು ಮತ್ತು ಭಕ್ತರು ದೇವಾಲಯದ ಆವರಣದಲ್ಲಿ ಬೆಲ್ಲದ ಅನ್ನ ಪರ್ವ ಮಾಡುವುದರ ಮೂಲಕ ಹರಕೆ ತೀರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT